ಥೇಟ್ ನಾಗವಲ್ಲಿ ರೀತಿ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವ ಜೆಡಿಎಸ್: ಕಾಂಗ್ರೆಸ್

BJP-JDS Vs COngress: ನಾಯಕತ್ವವಿಲ್ಲದ ಬಿಜೆಪಿ, ಜೆಡಿಎಸ್‍ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನವೆಂದು ಕಾಂಗ್ರೆಸ್ ಟೀಕಿಸಿದೆ.

Written by - Puttaraj K Alur | Last Updated : Jul 21, 2023, 03:57 PM IST
  • ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ!
  • ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು, ಈ ಸವಾರಿ ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ
  • ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ?
ಥೇಟ್ ನಾಗವಲ್ಲಿ ರೀತಿ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವ ಜೆಡಿಎಸ್: ಕಾಂಗ್ರೆಸ್   title=
ಜೆಡಿಎಸ್-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ’ವೆಂದು ಕುಟುಕಿದೆ.

ಇದನ್ನೂ ಓದಿ: ಉಗ್ರ ಕೃತ್ಯದ ಶಂಕೆ ಹಿನ್ನಲೆ: ದಾವಣಗೆರೆಯಲ್ಲಿ ವ್ಯಕ್ತಿಯ ಬಂಧನ..!

‘ನಾಯಕತ್ವವಿಲ್ಲದ ಬಿಜೆಪಿ, ಜೆಡಿಎಸ್‍ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ’ವೆಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಮೋದಿ ತಮ್ಮ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

‘ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ? ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ!!’ವೆಂದು ಕಾಂಗ್ರೆಸ್ ಕಿಡಿಕಾರಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News