ಬೆಂಗಳೂರು : ರೈತರ ಪಾಲಿಗೆ ಮರಣ ಶಾಸನವಾಗಿ ಪರಿಣಮಿಸಿರುವ ಕೇಂದ್ರದ ಮೂರು ಕೃಷಿ ಕಾನೂನುಗಳನ್ನು (Agriculture Laws) ಹಿಂಪಡೆಯುವಂತೆ ದೆಹಲಿಯ ಗಡಿಗಳಲ್ಲಿ 'ದೆಹಲಿ ಚಲೋ' (Delhi Chalo) ಹೆಸರಿನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು (Farmers Protest) ರಾಜ್ಯ ಕಾಂಗ್ರೆಸ್ (Congress) ಘಟಕವು ಜನವರಿ 11ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ತಯಾರಿ ನಡೆಸುತ್ತಿದೆ.


COMMERCIAL BREAK
SCROLL TO CONTINUE READING

ಅಂದು ಲಕ್ಷಾಂತರ ಜನರನ್ನು ಸೇರಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿ ರಾಜಭವನ (Rajbhawan)ಕ್ಕೆ ಮುತ್ತಿಗೆ ಹಾಕಬೇಕೆಂದು ನಿರ್ಧರಿಸಿದೆ. ಜೊತೆಗೆ ಅಂದು ಇಡೀ ಬೆಂಗಳೂರು ನಗರವನ್ನೇ ಸ್ಥಬ್ದಗೊಳಿಸಬೇಕೆಂದು ಆಲೋಚಿಸುತ್ತಿದೆ.


ಇದನ್ನೂ ಓದಿ - "ಜನವರಿ 26 ರ ಪಂಜಾಬ್ ರೈತರ ಕೇಸರಿ ಟ್ರ್ಯಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಡಿ"


ರಾಜ್ಯ ಕಾಂಗ್ರೆಸ್ನಿಂದ ರಾಜಭವನ ಮುತ್ತಿಗೆ ಹಿನ್ನೆಲೆಯಲ್ಲಿ ಕೆಪಿಸಿಸಿ (KPCC) ಅಧ್ಯಕ್ಷ ‌ಡಿ.ಕೆ. ಶಿವಕುಮಾರ್ (DK Shivakumar) ಇಂದು ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ಕಾಂಗ್ರೆಸ್ ಮುಖಂಡರೊಂದಿಗೆ ಕ್ವೀನ್ಸ್ ರಸ್ತೆಯ ಪಕ್ಷದ ಕಚೇರಿಯಿಂದ ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಉಪಸ್ಥಿತರಿದ್ದರು.


ಇದನ್ನೂ ಓದಿ - ಕೇಂದ್ರ ಸರ್ಕಾರದ ಜೊತೆಗಿನ 9 ನೇ ಸಭೆ 120 ರಷ್ಟು ವಿಫಲ ಎಂದ ರೈತರು...!


ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ (Krantiveera Sangolli Rayanna Railway Station) ದಿಂದ ರಾಜಭವನದವರಿಗೂ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜಿಸಿರುವ ಕಾಂಗ್ರೆಸ್ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಲು ಮುಂದಾಗಿದೆ. ದೂರದ ಜಿಲ್ಲೆಗಳಿಂದ ಹೆಚ್ಚು ಜನ ಬರುವುದು ಕಷ್ಟು ಎಂಬ ಹಿನ್ನೆಲೆಯಲ್ಲಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಂದ ಹೆಚ್ಚಿನ ಜನರನ್ನು ಕರೆತರುವ ಉದ್ದೇಶ ಹೊಂದಿದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ನಾಯಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆತರುವಂತೆ ಡಿ.ಕೆ.‌ ಶಿವಕುಮಾರ್ ಹೇಳಿದ್ದಾರೆ ಎಂದು ತಿಳಿದುಬಂದಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.