ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸನ್ನದ್ಧ; ನಾಳೆ ಹಾವೇರಿಗೆ ರಾಹುಲ್ ಗಾಂಧಿ
ಶನಿವಾರ ಬೆಳಗ್ಗೆ 10 ಗಂಟೆಗೆ ಹಾವೇರಿಗೆ ಆಗಮಿಸಲಿರುವ ರಾಹುಲ್ ಗಾಂಧಿ ಅವರು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಮುನ್ಸಿಪಲ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಬೆಂಗಳೂರು: ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಆರಂಭಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವಲ್ಲಿ ಕಾರ್ಯಪ್ರವೃತ್ತವಾಗಿದೆ. ಈ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾರ್ಚ್ 9(ನಾಳೆ)ರಂದು ಹಾವೇರಿಗೆ ಆಗಮಿಸಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಹಾವೇರಿಗೆ ಆಗಮಿಸಲಿರುವ ರಾಹುಲ್ ಗಾಂಧಿ ಅವರು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಮುನ್ಸಿಪಲ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ಕೊಡಲಿದ್ದಾರೆ. ಹಾವೇರಿ-ಗದಗ 8 ವಿಧಾನಸಭಾ ಕ್ಷೇತ್ರದಿಂದ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಶಿರಹಟ್ಟಿ ಮತಕ್ಷೇತ್ರದಿಂದಲೇ 40 ಸಾವಿರ ಕಾರ್ಯಕರ್ತರು ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.