ಬೆಂಗಳೂರು : ಇಂದು ಮೈಸೂರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಆಗಮಿಸಲಿದ್ದಾರೆ. ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆಗೆ ಇದರಿಂದ ಆನೆ ಬಲಬಂದಂತಾಗಿದೆ.


COMMERCIAL BREAK
SCROLL TO CONTINUE READING

ಇಂದು ಮಧ್ಯಾಹ್ನ 12.30ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬಳಿಕ ರಾಹುಲ್ ಗಾಂಧಿ ಜೊತೆ ಕೊಡಗಿನ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.


ಇದನ್ನೂ ಓದಿ : Bharat Jodo Yatra: : ರಸ್ತೆಯಲ್ಲಿ ಯುವಕನ ಪೇ ಸಿಎಂ ಶರ್ಟ್ ಬಿಚ್ಚಿಸಿ, ಹೊಡೆದ ಪೊಲೀಸ್


ಇನ್ನೂ, ಮಂಗಳವಾರ ಮೈಸೂರಿನಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಅವರು ಭಾಗಿಯಾಗಲಿದ್ದಾರೆ. ಜೊತೆಗೆ ಇದೇ ತಿಂಗಳು ಪ್ರಿಯಾಂಕಾ ಗಾಂಧಿ ಸಹ ಸಹ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರು ಮಂಡ್ಯದಲ್ಲಿ ರಾಹುಲ್ ಗಾಂಧಿ ಜೊತೆಗೆ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ. 


ಅಕ್ಟೋಬರ್ 4, 5 ಸೋನಿಯಾ ಕುಟುಂಬ ರಾಜ್ಯ ಪ್ರವಾಸ


ಸೋನಿಯಾ ಗಾಂಧಿ ಇಂದು ಸಂಜೆಯೇ ರಾಜ್ಯಕ್ಕೆ ಆಗಮಿಸಲಿದ್ದು, ನಾಳೆ ಮೈಸೂರಿನಿಂದ ಯಾತ್ರೆ ಪ್ರಾರಂಭಿಸುವ ಸಾಧ್ಯತೆಯಿದೆ. ಇನ್ನೂ ಅ. 5ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪ್ರಿಯಾಂಕ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ. ಸೋಮವಾರ ಪಾದಯಾತ್ರೆ ಮುಗಿದ ಬಳಿಕ ಸೋನಿಯಾ ಕುಟುಂಬ ಕೊಡಗಿಗೆ ತೆರಳಲಿದೆ. ಭಾರತ ಜೋಡೋ ಪಾದಯಾತ್ರೆಗೆ ಅ.4 ಮತ್ತು 5 ರಂದು ಬಿಡುವು ಇರುವ ಕಾರಣ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಕೊಡಗಿನ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.


ಇದನ್ನೂ ಓದಿ : 'ನಮ್ಮ ಪಾದಯಾತ್ರೆ ಕಂಡು ಬಿಜೆಪಿ ಅವರಿಗೆ ಹತಾಶೆ ಕಾಡುತ್ತಿದೆ'


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.