"ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ".!

ಇದೀಗ ಕಾಂಗ್ರೆಸ್ ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದೆ. ಈ ಮೂಲಕ ರಾಜ್ಯದ ಜನತೆಯ ಮತ ಸೆಳೆಯಲು ಭರ್ಜರಿ ಘೋಷಣೆಯನ್ನೇ ಮಾಡಿದೆ.  

Written by - Ranjitha R K | Last Updated : Jan 11, 2023, 02:33 PM IST
  • ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್
  • ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್
  • ಗೃಹಜ್ಯೋತಿ' ಯೋಜನೆ ಜಾರಿಗೆ ತರುವ ಮಾತು
"ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ".! title=

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ಇದಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿದೆ. ರಾಜ್ಯದ ಜನತೆಯನ್ನು ತಮ್ಮತ್ತ ಸೆಳೆದುಕೊಳ್ಳಲು ಏನು ಮಾಡಬೇಕೋ ಎಲ್ಲಾ ಅಸ್ತ್ರಗಳನ್ನೂ ಪ್ರಯೋಗಿಸುತ್ತಿದೆ. ಇದೀಗ ಕಾಂಗ್ರೆಸ್ ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದೆ. 

ಬೆಲೆಯೇರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆಮ್ಮದಿ ನೀಡುವ ಯೋಜನೆಯನ್ನು ನಾವು ಘೋಷಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ. ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ 'ಗೃಹಜ್ಯೋತಿ' ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲಿದೆ ಎಂದು ಹೇಳಿದೆ. 

ಇದನ್ನೂ ಓದಿ :  ಮೆಟ್ರೋ ಪಿಲ್ಲರ್ ದುರಂತ: ನಿರ್ಮಾಣ ಕಂಪನಿ ಸೇರಿ BMRCLನ 8 ಜನರ ವಿರುದ್ಧ FIR!

ರಾಜ್ಯದ ಜನ ಬೆಲೆ ಏರಿಕೆಯಿಂದ ತತ್ತರಿಸಿದ್ದು, ರಾಜ್ಯದ ಜನತೆಯ ವಿದ್ಯುತ್ ಬಿಲ್ ಇನ್ಮುಂದೆ ಕಾಂಗ್ರೆಸ್ ಜವಾಬ್ದಾರಿ ಎಂದು ಪಕ್ಷ ಹೇಳಿದೆ, ಅಲ್ಲದೆ ಇದು ಕಾಂಗ್ರೆಸ್ ರಾಜ್ಯದ ಜನತೆಗೆ ನೀಡುತ್ತಿರುವ ಗ್ಯಾರಂಟಿ ಎಂದಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ. 

 

ಇದನ್ನೂ ಓದಿ :  ಡೈಗರ್ ಹವಾ: ಈ ಊರಲ್ಲಿ ನಾಯಿಯಾಯಿತು ಹುಲಿ!

ಈಗಾಗಲೇ ಬೆಳಗಾವಿಯಿಂದ ಪ್ರಜಾಧ್ವನಿ  ಯಾತ್ರೆಯಾ ಬಗ್ಗೆ ಕೂಡಾ ಕಾಂಗ್ರೆಸ್ ಘೋಷಿಸಿದೆ. ಯಾತ್ರೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 'ಪ್ರಜಾಧ್ವನಿ' ವಿಶೇಷ ಬಸ್ ಮೂಲಕ ಜಂಟಿ ಪ್ರವಾಸ ಮಾಡಲಿದ್ದಾರೆ. ಚಿಕ್ಕೋಡಿಯಿಂದ ಆರಂಭವಾಗಲಿರುವ ಯಾತ್ರೆ, ಪ್ರತಿದಿನ ಎರಡು ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಲಿದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News