ಬೆಂಗಳೂರು: ದೇಶಾದ್ಯಂತ ಕಾಂಗ್ರೆಸ್ (Congress) ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಕೈಗೊಂಡಿದ್ದು ನಗರದ ಕೆಪಿಸಿಸಿ (KPCC) ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಡಿ.ಕೆ̤ಶಿವಕುಮಾರ್ (DK Shivakumar), ಚಪ್ಪಲಿ ಏಟು ತಿನ್ನಬಹುದು ಆದರೆ ದುಡ್ಡಿನ ಎಷ್ಟು ತಿನ್ನುವುದಕ್ಕೆ ಆಗಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Basavaraj Bommai : ಶ್ರೀಶೈಲದಲ್ಲಿ ಕರ್ನಾಟಕ ಭಕ್ತಾದಿಗಳಿಗೆ ರಕ್ಷಣೆ ನೀಡುವಂತೆ ಆಂಧ್ರ ಸಿಎಂಗೆ ಸಿಎಂ ಬೊಮ್ಮಾಯಿ ಮನವಿ


ಕೆಪಿಸಿಸಿ ಮುಂಬಾಗದಲ್ಲಿ ಎಲ್ ಪಿ ಜಿ ಹಾಗೂ ದ್ವಿಚಕ್ರ ವಾಹನ ಬಿಟ್ಟು ಅದಕ್ಕೆ ಹೂವನ್ನು ಹಾಕಿ ಪ್ರತಿಭಟನೆ (Congress Protest) ಮಾಡಿದ ನಂತರ ಮಾತನಾಡಿದ ಇವರು, ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಹೋಗಿದೆ ಎಂದರು. 


ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ. ದಿನಾ ಪಿಕ್ ಪಾಕೆಟ್ ಆಗ್ತಿದೆ. ಗ್ಯಾಸ್ ಸಿಲಿಂಡರ್, ಬೈಕ್ ಕಾರಿಗೆ ಹಾರ ಹಾಕಿ ಪೂಜೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದೇವೆ ಎಂದು ಹೇಳಿದರು.


ಇದನ್ನೂ ಓದಿ: ‘ಜನರು ತಿರಸ್ಕರಿಸುವ ಭಯವನ್ನು ಮತಯಂತ್ರದ ಮೇಲೆ ಹಾಕುವುದೇಕೆ?’


ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಭಾಗಿಯಾಗಿದ್ದರು. ಇದೇ ವೇಳೆ ಬೆಲೆ ಏರಿಕೆ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.