ಜನರ ತಲೆ ಮೇಲೆ ಫ್ಲವರ್ ಪಾಟ್ ಇಟ್ಟ ಕಾಂಗ್ರೆಸ್..ಹಾಲಿನ ಬೆಲೆ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

HD Kumarswamy : ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

Written by - Prashobh Devanahalli | Edited by - Savita M B | Last Updated : Jul 22, 2023, 05:04 PM IST
  • ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆ ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ.
  • ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ!
  • ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!
ಜನರ ತಲೆ ಮೇಲೆ ಫ್ಲವರ್ ಪಾಟ್ ಇಟ್ಟ ಕಾಂಗ್ರೆಸ್..ಹಾಲಿನ ಬೆಲೆ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ title=

ಬೆಂಗಳೂರು: ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!! ಎಂದು ಅವರು ಕಿಡಿಕಾರಿದ್ದಾರೆ.

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದಿದ್ದಾರೆ ಅವರು.

ಇದನ್ನೂ ಓದಿ-ನಾವೆಲ್ಲ ಬಡ್ಡಿ ಮಕ್ಕಳು : ಮುಖ್ಯಮಂತ್ರಿ ಚಂದ್ರು

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ಟೀಕಿಸಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಹೆಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ- Good News: ಶೀಘ್ರವೇ 660 ಪಿಡಿಒ & 1323 ಗ್ರೇಡ್ ಕಾರ್ಯದರ್ಶಿಗಳ ನೇಮಕ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News