ನವದೆಹಲಿ: ಆಷಾಡದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಹೇಳಿತ್ತು. ಈ ಹಿನ್ನೆಲೆಯಲ್ಲಿ ಆಷಾಡ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಶಾಸಕರಲ್ಲಿ ಸಚಿವ ಸ್ಥಾನ ಅಥವಾ ನಿಗಮ ಮಂಡಳಿ ಆಸೆ ಚಿಗುರಿದ್ದು, ಕಾಂಗ್ರೆಸಿನ ಎಂಟಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಶಾಸಕರಾದ ರಹೀಂ ಖಾನ್, ನಾರಾಯಣರಾವ್, ಬಿ.‌ನಾಗೇಂದ್ರ, ಪ್ರತಾಪಗೌಡ ಪಾಟೀಲ್ ಮತ್ತಿತರರು ಸೋಮವಾರ ರಾತ್ರಿಯೇ ದೆಹಲಿಗೆ ಆಗಮಿಸಿದ್ದು, ಸಚಿವ ರಮೇಶ್ ಜಾರಕಿಹೊಳಿ ಕೂಡ ದೆಹಲಿಗೆ ಆಗಮಿಸಿದ್ದಾರೆ.


ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಂದು ರಾಜ್ಯ ಚುನಾವಣಾ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಲಿರುವ ತಂಡ ಸಚಿವಸ್ಥಾನ ಅಥವಾ ನಿಗಮ ಮಂಡಳಿ ಸ್ಥಾನಕ್ಕೆ ಲಾಭಿ ನಡೆಸಲಿದ್ದು, ನಂತರ ಹೈಕಮಾಂಡ್ ಭೇಟಿಗೂ ಶಾಸಕರು  ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.