DK Shivakumar: ಮಸ್ಕಿ ಬಿಜೆಪಿ ಅಭ್ಯರ್ಥಿಯನ್ನ ಅನರ್ಹಗೊಳಿಸಲು ಕಾಂಗ್ರೆಸ್ ಶತ ಪ್ರಯತ್ನ..!

ಚುನಾವಣಾ ಆಯೋಗ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಬೇಕು

Last Updated : Apr 11, 2021, 06:13 PM IST
  • ಉಪಚುನಾವಣೆಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ವಿತರಿಸುತ್ತಿದ್ದಾರೆ.
  • ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪ
  • ರಾಜ್ಯ ಚುನಾವಣಾ ಆಯೋಗ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಬೇಕು
DK Shivakumar: ಮಸ್ಕಿ ಬಿಜೆಪಿ ಅಭ್ಯರ್ಥಿಯನ್ನ ಅನರ್ಹಗೊಳಿಸಲು ಕಾಂಗ್ರೆಸ್ ಶತ ಪ್ರಯತ್ನ..! title=

ಕಲಬುರಗಿ : ಉಪಚುನಾವಣೆಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ವಿತರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. 

ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಡಿಕೆ ಶಿವಕುಮಾರ್(DK Shivakumar), ಬಿಜೆಪಿಯವವರು ಮತದಾರರಿಗೆ ಹಣ ನೀಡುತ್ತಿದ್ದಾರೆ. ಹಾಗಾಗಿ ರಾಜ್ಯ ಚುನಾವಣಾ ಆಯೋಗ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : Bus Strike: ಐದನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಇದಕ್ಕೆ ಸರ್ಕಾರದ ಅಭಿಪ್ರಾಯವೇನು?

"ಬಿಜೆಪಿ ಕಾರ್ಯಕರ್ತರು(BJP Workers) ಮತಗಳಿಗಾಗಿ ಹಣ ಹಂಚುತ್ತಿದ್ದಾರೆ ಎಂದು ಜನರು ಬಹಿರಂಗವಾಗಿ ಹೇಳಿದ್ದಾರೆ. ಇದರ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸುವಂತೆ ಕೋರಿ ಇಸಿಗೆ ದೂರು ನೀಡಲಿದೆ" ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾನಿಲಯ

"ಜಿಲ್ಲಾಧಿಕಾರಿಗಳು(DC), ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಮತದಾನದ ವ್ಯಾಪ್ತಿಯ ಕ್ಷೇತ್ರಗಳಲ್ಲಿನ ಸಿಬ್ಬಂದಿಗಳು ರಾಜ್ಯ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಇಂತಹ ಅಕ್ರಮಗಳನ್ನು ಬಹಿರಂಗವಾಗಿ ಮಾಡಲು ಆಡಳಿತದ ಬೆಂಬಲವಿಲ್ಲದೆ ಸಾಧ್ಯವಿಲ್ಲ" ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : Heavy Rainfall: ಬಿರು ಬಿಸಿಲಿನ ಮಧ್ಯ ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆ!

ಜನರ ಪ್ರತಿಕ್ರಿಯೆಯಿಂದ ನೋಡಿದರೆ, ಕಾಂಗ್ರೆಸ್ ಈ ಮೂರು ಉಪಚುನಾವಣೆ(By Election)ಗಳನ್ನು ಗೆಲ್ಲುತ್ತದೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News