ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ ರೈ

ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ. 

Written by - Ranjitha R K | Last Updated : May 16, 2023, 01:29 PM IST
  • ಚುನಾವಣಾ ರಾಜಕೀಯದಿಂದ ನಿವೃತ್ತ
  • ಸಚಿವ ಬಿ ರಮಾನಾಥ ರೈ ಘೋಷಣೆ
  • ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯನಾಗಿರುತ್ತಾನೆ ಎಂದ ನಾಯಕ
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಹಿರಿಯ ಮುಖಂಡ  ರಮಾನಾಥ ರೈ  title=

ಮಂಗಳೂರು : ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.  ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ್ದಾರೆ. 

ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ರಾಜ್ಯದ ಜನತೆಗೆ ಹಾಗೂ ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಮತ ಚಲಾಯಿಸಿದ ಮತದಾರರಿಗೆ ರಮಾನಾಥ ರೈ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದ್ದರೂ ರಾಜ್ಯದಲ್ಲಿ ಪಕ್ಷ ಜಯ ಗಳಿಸಿರುವುದರಿಂದ ಪಕ್ಷದ ಬೆಂಬಲಿಗರು ಎದೆಗುಂದದೆ ಕಾರ್ಯನಿರ್ವಹಿಬೇಕು ಎಂದು ಕರೆ ನೀಡಿದ್ದಾರೆ. 

ಇದನ್ನೂ ಓದಿ : ಸಿಎಸ್ಆರ್ ಉಪಕ್ರಮದಡಿ ವೈದ್ಯಕೀಯ ಕ್ಷೇತ್ರಕ್ಕೆ ಸಹಕಾರ: ಡಾ ಎಂಸಿ ಮೋದಿ ಚಾರಿಟೇಬಲ್ ಕಣ್ಣಿನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಕೊಡುಗೆ ನೀಡಿದ ಹಿಟಾಚಿ ರೈಲ್ ಎಸ್‌ಟಿಎಸ್

ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ರಮಾನಾಥ ರೈ ಕಾರ್ಯಕರ್ತರಿಗೆ ಹೇಳಿದ್ದಾರೆ. ಬಂಟ್ವಾಳದಲ್ಲಿ ಕಳೆದ ಬಾರಿಗಿಂತ ಈ ಬಾರಿ ನನಗೆ ಹೆಚ್ಚು ಮತಗಳು ಬಿದ್ದಿವೆ. ಆದರೂ ಸೋಲಾಗಿದೆ. ಈ ಬಗ್ಗೆ ಅವಲೋಕನ ನಡೆಸುತ್ತೇವೆ ಎಂದು ರಮಾನಾಥ ರಾವ್ ಹೇಳಿದ್ದಾರೆ. 

ನಾನೆಂದೂ ಪಕ್ಷದ ಮಾತನ್ನು ಮೀರಿಲ್ಲ. ಇನ್ನು ಮುಂದೆಯೂ ಪಕ್ಷ ನೀಡುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ. ಆದರೆ ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಹೇಳಿದ್ದಾರೆ. 

ಇದನ್ನೂ ಓದಿ : ಚಾಮರಾಜನನಗರ ತಲುಪಿದ ರಾಜೀವ್‌ಗಾಂಧಿ ಜ್ಯೋತಿ ಯಾತ್ರೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News