RL Jalappa Eye Donate : ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್.ಎಲ್.ಜಾಲಪ್ಪ!
ಆರ್.ಎಲ್.ಜಾಲಪ್ಪ(RL Jalappa) ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಜಾಲಪ್ಪ ಅವರ ನಿಧನ ನಂತರ ಅವರ ಕಣ್ಣುಗಳನ್ನು ದಾನ ಮಾಡಿದ್ದಾರೆ.
ಕೋಲಾರ : ಶ್ವಾಸಕೋಶದ ಸಮಸ್ಯೆಯಿಂದ ಬಳುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರು ಇಂದು ಸಂಜೆ 7.35 ಕ್ಕೆ ಅಸುನೀಗಿದ್ದಾರೆ.
ಆರ್.ಎಲ್.ಜಾಲಪ್ಪ(RL Jalappa) ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಜಾಲಪ್ಪ ಅವರ ನಿಧನ ನಂತರ ಅವರ ಕಣ್ಣುಗಳನ್ನು ದಾನ ಮಾಡಿದ್ದಾರೆ.
ಇದನ್ನೂ ಓದಿ : RL Jalappa : ಕೇಂದ್ರ ಮಾಜಿ ಸಚಿವ ಆರ್.ಎಲ್ ಜಾಲಪ್ಪ ಇನ್ನಿಲ್ಲ!
ನಗರದ ಟಮಕದಲ್ಲಿನ ದೇವರಾಜ ಅರಸು ಮೆಡಿಕಲ್ ಕಾಲೇಜು(D Devaraj Arasu Medical College) ಕ್ಯಾಂಪಸ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ರಾತ್ರಿ 10 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅವರ ಸಂಬಂಧಿಕರು ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ಕೊಂಡೊಯ್ಯಲಿದ್ದಾರೆ. ನಾಳೆ ಸಂಜೆ ನಾಲ್ಕು ಗಂಟೆಗೆ ತೂಬುಗೆರೆ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಏರ್ಪಾಡು ಮಾಡಲಾಗಿದೆ. ನಂತರ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಕ್ಯಾಂಪಸ್ ನಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಿದ್ದಾರೆ.
ಜಾಲಪ್ಪ ನಿಧನ ಹಿನ್ನೆಲೆ ಸಿಎಂ ಬೊಮ್ಮಾಯಿ ದರ್ಶನ
ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕೋಲಾರಕ್ಕೆ ಆಗಮಿಸಲಿದ್ದಾರೆ. ರಾತ್ರಿ ಹತ್ತು ಗಂಟೆ ಸುಮಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಕೋಲಾರದ ದೇವರಾಜ ಅರಸು ಮೆಡಿಕಲ್ ಕಾಲೇಜು ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ : ಅತ್ಯಾಚಾರದ ಹೇಳಿಕೆ: ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.