ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಸಿಂಗಾಪುರದಲ್ಲಿ ಕುಳಿತು ಬಹುಮತದ ಸರ್ಕಾರ ಬೀಳಿಸಲು ಯೋಜನೆ ರೂಪಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಸಂಚು ರೂಪಿಸುವ ಬದಲು ವಿದೇಶದಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಸಿಂಗಾಪುರದ ನಾಟಕ ಆರಂಭಿಸಿದ್ದಾರೆ: ಬಿಜೆಪಿ ಟೀಕೆ


ಇದೇ ವಿಚಾರವಾಗಿ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ‘ಕನ್ನಡಿಗರು ಅತೀವ ಭರವಸೆಯನ್ನಿಟ್ಟು ಗೆಲ್ಲಿಸಿದ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರೆ ಜನರೇ ದಂಗೆ ಏಳುತ್ತಾರೆ. ಈಗ ಸಿಂಗಾಪುರಕ್ಕೆ ಹೋದವರು ನಂತರ ಮಂಗಾಪುರಕ್ಕೆ ಓಡುವ ಸ್ಥಿತಿ ಉಂಟಾಗಲಿದೆ. ಪದೇ ಪದೇ ಪ್ರಜಾಪ್ರಭುತ್ವದ ಆಶಯಗಳ ವಿರುದ್ಧ ಕೆಲಸ ಮಾಡುವ ಬಿಜೆಪಿ ಈಗಲಾದರೂ ಜನರ ತೀರ್ಪನ್ನು ಗೌರವಿಸುವುದನ್ನು ಕಲಿಯಲಿ’ ಎಂದು ಕಾಂಗ್ರೆಸ್ ಟೀಕಿಸಿದೆ.


ಈ ಸರ್ಕಾರಕ್ಕೆ ಉಳಿಗಾಲವಿಲ್ಲವೆಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ: ಬಿಜೆಪಿ


ಕಾಂಗ್ರೆಸ್ ಕುಟುಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.