ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!’ ಎಂದು ಕುಟುಕಿದೆ.


COMMERCIAL BREAK
SCROLL TO CONTINUE READING

‘#PuppetCM ಬಸವರಾಜ್ ಬೊಮ್ಮಾಯಿಯವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ. ಸಿಎಂ ಬೊಮ್ಮಾಯಿಯವರೇ ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ? ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ #PuppetCM ಮಾತ್ರವೇ? ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ?’ ಎಂದು ಪ್ರಶ್ನಿಸಿದೆ.


ಡಿ.ಕೆ.ಶಿವಕುಮಾರ್ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ & ಪರಮ ಬಾಲಿಶ: ಎಚ್‌ಡಿಕೆ


‘ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬಸವರಾಜ್ ಬೊಮ್ಮಾಯಿಯವರನ್ನು ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ?’ ಎಂದು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಪ್ರಶ್ನಿಸಿದೆ.


ಶೀಘ್ರವೇ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ ಕೊಡಲು ಚಿಂತನೆ


ಬಿಜೆಪಿ ಮರ್ಯಾದಾ ಪುರುಷೋತ್ತಮನ ಮರ್ಯಾದೆ ಕಳೆಯುತ್ತಿರುವುದಕ್ಕೆ ರಾಮ ಎಂದಿಗೂ ಕ್ಷಮಿಸುವುದಿಲ್ಲ’ವೆಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.