ಬಿಜೆಪಿ ಲಿಂಗಾಯತ ವಿರೋಧಿ ಮಾತ್ರವಲ್ಲ, ಇಡೀ ಮನುಕುಲದ ವಿರೋಧಿ: ಕಾಂಗ್ರೆಸ್

ಮಠಗಳ ಅನುದಾನದಲ್ಲೂ 30% ಕಮಿಷನ್ ದೋಚಲಾಗಿದೆ ಎಂದು ಲಿಂಗಾಯತ ಸ್ವಾಮಿಗಳೇ ಆರೋಪಿಸಿದ್ದರು. ಇದು ಲಿಂಗಾಯತರಿಗೆ ಮಾಡಿದ ಅವಮಾನವಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Written by - Puttaraj K Alur | Last Updated : Sep 24, 2022, 02:23 PM IST
  • ಬಿಜೆಪಿ ಲಿಂಗಾಯತ ವಿರೋಧಿ ಮಾತ್ರವಲ್ಲ, ಇಡೀ ಮನುಕುಲದ ವಿರೋಧಿ
  • ಬಿಜೆಪಿ ಸರ್ಕಾರದಲ್ಲಿ ಬಿಲ್ ಪಾಸ್ ಆಗ್ಬೇಕು ಅಂದ್ರೆ 40% ಕೊಡಲೇಬೇಕು!
  • ಕರ್ನಾಟಕ ಈಗ #PayCM ಮುಕ್ತ ರಾಜ್ಯವಾಗಬೇಕಿದೆ ಎಂದು ಟೀಕಿಸಿದ ಕಾಂಗ್ರೆಸ್
ಬಿಜೆಪಿ ಲಿಂಗಾಯತ ವಿರೋಧಿ ಮಾತ್ರವಲ್ಲ, ಇಡೀ ಮನುಕುಲದ ವಿರೋಧಿ: ಕಾಂಗ್ರೆಸ್  title=
#40PercentSarkara ಎಂದು ಟೀಕಿಸಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ಲಿಂಗಾಯತ ವಿರೋಧಿ ಮಾತ್ರವಲ್ಲ, ಇಡೀ ಮನುಕುಲದ ವಿರೋಧಿ ಎಂದು ಕಾಂಗ್ರೆಸ್ ಟೀಕಿಸಿದೆ. #PayCM ಹ್ಯಾಶ್ ಟ್ಯಾಗ್ ಬಳಿಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

‘ಪರೀಕ್ಷೆ ಪಾಸ್ ಆಗ್ಬೇಕು ಅಂದ್ರೆ 35 ಮಾರ್ಕ್ಸ್ ಪಡೆಯಬೇಕು! ಬಿಜೆಪಿ ಸರ್ಕಾರದಲ್ಲಿ ಬಿಲ್ ಪಾಸ್ ಆಗ್ಬೇಕು ಅಂದ್ರೆ 40% ಕೊಡಲೇಬೇಕು! ನಿನ್ನೆ ಬಿಜೆಪಿಯವರು ಕಳಿಸಿದ ಬಸ್ಸು"ಡಕೋಟಾ ಇಂಜಿನ್ ಸರ್ಕಾರ, ಬ್ರೇಕ್ ಇಲ್ಲದ ಭ್ರಷ್ಟಾಚಾರ" ಎಂದು ರೋಧಿಸುತ್ತಿತ್ತು! ಕರ್ನಾಟಕ ಈಗ #PayCM ಮುಕ್ತ ರಾಜ್ಯವಾಗಬೇಕಿದೆ. #40PercentSarkara’ ಅಂತಾ ಟೀಕಿಸಿದೆ.

ಇದನ್ನೂ ಓದಿ: ಸಂಘಟನೆ ಹೆಸರಲ್ಲಿ ಸಹಾಯಕ್ಕೆ ಬರ್ತಾರೆ; ಲಕ್ಷ ಲಕ್ಷ ವಸೂಲಿ ಮಾಡ್ತಾರೆ ಹುಷಾರ್..!

‘ಜಾತಿ ಶೀಲ್ಡ್ ಹಿಡಿದು ಕಮಿಷನ್ ಭ್ರಷ್ಟಾಚಾರವನ್ನು ರಕ್ಷಿಸಲು ಬಿಜೆಪಿ ವಿಫಲ ಯತ್ನ ನಡೆಸುತ್ತಿದೆ. ಮಠಗಳ ಅನುದಾನದಲ್ಲೂ 30% ಕಮಿಷನ್ ದೋಚಲಾಗಿದೆ ಎಂದು ಲಿಂಗಾಯತ ಸ್ವಾಮಿಗಳೇ ಆರೋಪಿಸಿದ್ದರು. ಇದು ಲಿಂಗಾಯತರಿಗೆ ಮಾಡಿದ ಅವಮಾನವಲ್ಲವೇ? #40PercentSarkaraದ್ದು "ಜಾತ್ಯತೀತ ಭ್ರಷ್ಟಾಚಾರ" ಇದರಲ್ಲಿ ಲಿಂಗಾಯತರೂ ಸಂತ್ರಸ್ತರೇ’ ಎಂದು ಕುಟುಕಿದೆ.

‘40% ಕಮಿಷನ್ನಿಗಾಗಿ ಕಿರುಕುಳ ನೀಡಿ #40PercentSarkara ಕೊಲೆ ಮಾಡಿದ ಸಂತೋಷ್ ಪಾಟೀಲ್ ಕೂಡ ಲಿಂಗಾಯತ. ಲಿಂಗಾಯತನೊಬ್ಬನ ಜೀವ ತೆಗೆದ ಬಿಜೆಪಿ ಸರ್ಕಾರ ಲಿಂಗಾಯತ ವಿರೋಧಿಯಲ್ಲವೇ? ಕಮಿಷನ್ ಕಿರುಕುಳದ ಸಂತ್ರಸ್ತರಲ್ಲಿ ಲಿಂಗಾಯತ ಗುತ್ತಿಗೆದಾರರು ಇಲ್ಲವೇ? ಬಿಜೆಪಿ ಲಿಂಗಾಯತ ವಿರೋಧಿ ಮಾತ್ರವಲ್ಲ, ಇಡೀ ಮನುಕುಲದ ವಿರೋಧಿ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿಬಂಧಿತ PFI ಪ್ರಮುಖರ ಮನೆಯಲ್ಲಿತ್ತು ಸಾವರ್ಕರ್ ಪುಸ್ತಕ : ಕೆಲ ರಾಜಕಾರಣಿಗಳ ಜೊತೆ ಇತ್ತಂತೆ ನಂಟು‌‌

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News