ರಸ್ತೆಗುಂಡಿಗಳಿಗೆ ಹೊಣೆ ಯಾರು? ಸಾವುಗಳಿಗೆ ಕಾರಣ ಯಾರು?: SayCM ಎಂದ ಕಾಂಗ್ರೆಸ್

‘ಬೊಮ್ಮಾಯಿ ವರ್ಷನ್ ಅಚ್ಛೆ ದಿನಗಳ’ ಭಾಷಣ ಕುಟ್ಟುವ #PayCM ಬೊಮ್ಮಾಯಿಯವರೇ, ಕನಿಷ್ಠ ರಸ್ತೆ ಗುಂಡಿಗಳನ್ನು ಮುಚ್ಚಲು ಸಹ ನಿಮಗೆ ದಮ್ಮು ತಾಕತ್ತು ಇಲ್ಲದಾಗಿರುವುದೇಕೆ? ಎಂದು ಕಾಂಗ್ರೆಸ್ ಟೀಕಿಸಿದೆ.

Written by - Puttaraj K Alur | Last Updated : Oct 31, 2022, 07:16 PM IST
  • ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರದಲ್ಲಿ ಹೈಕೋರ್ಟ್ ಮೇಲಿಂದ ಮೇಲೆ ಛೀಮಾರಿ ಹಾಕುತ್ತಿದೆ
  • ಇದುವರೆಗೂ ಒಬ್ಬೇ ಒಬ್ಬ ಅಧಿಕಾರಿಯನ್ನು ರಸ್ತೆಗುಂಡಿಗೆ ಹೊಣೆ ಮಾಡಿ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ
  • #PuppetCM ಅವರೇ ಅಧಿಕಾರಿಗಳು ನಿಮ್ಮ ಮಾತು ಕೇಳುವುದಿಲ್ಲವೇ, ನಿಮ್ಮ ಅಂಕೆಯಲ್ಲಿಲ್ಲವೇ?
ರಸ್ತೆಗುಂಡಿಗಳಿಗೆ ಹೊಣೆ ಯಾರು? ಸಾವುಗಳಿಗೆ ಕಾರಣ ಯಾರು?: SayCM ಎಂದ ಕಾಂಗ್ರೆಸ್  title=
ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. #SayCM ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ರಸ್ತೆ ಗುಂಡಿಗಳ ಬಗ್ಗೆ ಉತ್ತರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಆಗ್ರಹಿಸಿದೆ.  

ರಸ್ತೆ ಗುಂಡಿಗಳ ವಿಚಾರದಲ್ಲಿ ಹೈಕೋರ್ಟ್ ಮೇಲಿಂದ ಮೇಲೆ ಛೀಮಾರಿ ಹಾಕುತ್ತಿದೆ. ಇದುವರೆಗೂ ಒಬ್ಬೇ ಒಬ್ಬ ಅಧಿಕಾರಿಯನ್ನು ರಸ್ತೆಗುಂಡಿಗೆ ಹೊಣೆ ಮಾಡಿ ಕ್ರಮ ಕೈಗೊಳ್ಳಲಿಲ್ಲ ಸರ್ಕಾರ. #PuppetCM ಅವರೇ, ಅಧಿಕಾರಿಗಳು ನಿಮ್ಮ ಮಾತು ಕೇಳುವುದಿಲ್ಲವೇ, ನಿಮ್ಮ ಅಂಕೆಯಲ್ಲಿಲ್ಲವೇ? ರಸ್ತೆಗುಂಡಿಗಳಿಗೆ ಹೊಣೆ ಯಾರು? ಸಾವುಗಳಿಗೆ ಕಾರಣ ಯಾರು?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಒಂದೇ ಕಡೆ ಪೊಲೀಸ್ ದಂಪತಿ ಕೆಲಸಕ್ಕೆ ಸರ್ಕಾರಕ್ಕೆ ಮನವಿ: ಒಪ್ಪಿಗೆ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಸೂದ್

‘ಬೆಂಗಳೂರು ಉಸ್ತುವಾರಿಗಾಗಿ ಕಿತ್ತಾಡುವ ಸಚಿವರು ರಸ್ತೆಗುಂಡಿ ಮುಚ್ಚುವ ವಿಚಾರದಲ್ಲಿ ಅದೇ ಹೋರಾಟ ತೋರುತ್ತಿಲ್ಲವೇಕೆ? 'ಬೊಮ್ಮಾಯಿ ವರ್ಷನ್ ಅಚ್ಛೆ ದಿನಗಳ' ಭಾಷಣ ಕುಟ್ಟುವ #PayCM ಬೊಮ್ಮಾಯಿಯವರೇ, ಕನಿಷ್ಠ ರಸ್ತೆ ಗುಂಡಿಗಳನ್ನು ಮುಚ್ಚಲು ಸಹ ನಿಮಗೆ ದಮ್ಮು ತಾಕತ್ತು ಇಲ್ಲದಾಗಿರುವುದೇಕೆ? ನಿಮ್ಮ ಪ್ರಲಾಪ ಮೈಕ್ ಮುಂದೆ ಮಾತ್ರವೇ?’ ಎಂದು ಕಾಂಗ್ರೆಸ್ ಟೀಕಿಸಿದೆ.

‘ಸಿನೆಮಾ ಪ್ರಿಯ ಸಿಎಂ ಬೊಮ್ಮಾಯಿಯವರು ಪ್ರತಿದಿನವೂ ಥೇಟ್ ಸಿನೆಮಾ ಶೈಲಿಯಲ್ಲಿ ದಮ್ಮು ತಾಕತ್ತಿನ ಡೈಲಾಗ್ ಪ್ರಾಕ್ಟೀಸ್ ಮಾಡುತ್ತಿದ್ದಾರೆ! ಮುಖ್ಯಮಂತ್ರಿಗಳೇ, ಸಿನೆಮಾ ಗುಂಗು ಬಿಟ್ಟು ವಾಸ್ತವ ಜಗತ್ತಿನಲ್ಲಿ ಕಣ್ಬಿಟ್ಟು ನೋಡಿ, ರಸ್ತೆ ಗುಂಡಿಗಳು ಕಾಣುತ್ತವೆ. ಪ್ರಾಣ ಬಿಟ್ಟವರ ಕುಟುಂಬದ ರೋಧನೆ ಕಾಣುತ್ತದೆ, ನಿಮ್ಮ ವೈಫಲ್ಯಗಳು ಕಾಣುತ್ತವೆ’ ಎಂದು ಕಾಂಗ್ರೆಸ್ ಕುಟುಕಿದೆ.

ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್!: ಶೀಘ್ರವೇ ನಂದಿನ ಹಾಲಿನ ದರ 3 ರೂ. ಹೆಚ್ಚಳ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News