ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿ ಭೇಟಿಯ ಮರ್ಮವೇನು ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

‘#BSYMukthaBJP ಅಧ್ಯಾಯ ಮುಗಿದಿದೆ ಎಂದುಕೊಳ್ಳುತ್ತಿರುವಾಗಲೇ ಯಡಿಯೂರಪ್ಪ ಪುನಃ ದೆಹಲಿಗೆ ಹೊರಟಿದ್ದಾರೆ. ಯತ್ನಾಳ್ ಹೇಳಿದಂತೆ #TirupatiAgreement ನಂತರ ಮತ್ತೇನೋ ಹೊಸ ರಾಜಕೀಯ ಬದಲಾವಣೆ ಆಗುವಂತಿದೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.


ಕರಡು ಮತದಾರರ ಪಟ್ಟಿ ಬಿಡುಗಡೆ: ವರ್ಷಾಂತ್ಯದೊಳಗೆ ಬಿಬಿಎಂಪಿ ಚುನಾವಣೆ


ಭ್ರಷ್ಟಾಚಾರದ 'ಮರಿ' ಹೊರಬಂದಿದೆ!


ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಭವಿಷ್ಯ ಹೇಳುವ ನಾಸ್ಟ್ರಾಡಾಮಸ್! ಅವರು ಬಾಯಲ್ಲಿ ಬಂದ #ThirupatiAgreement ಎಂಬ ಸಂಗತಿಯಲ್ಲಿ ಹಲವು ರಹಸ್ಯ ಅಡಗಿರುವುದು ಸತ್ಯ. ಸಿಎಂ ಬೊಮ್ಮಾಯಿಯವರೇ, ಏನು ಆ ರಹಸ್ಯ? ಬಿಟ್ ಕಾಯಿನ್ ಹಗರಣದ್ದೋ?, 40% ಕಮಿಷನ್ ವಿಚಾರದ್ದೋ?, ‘ಸಿಎಂ ಬದಲಾವಣೆ’ಗೆ ಸಂಬಂಧಿಸಿದ್ದೋ? ಅಥವಾ ಸಿಎಂ ಹುದ್ದೆಯ 2,500 ಕೋಟಿಯದ್ದೋ?’ ಎಂದು ಕಾಂಗ್ರೆಸ್ ಕುಟುಕಿದೆ.


ಇದನ್ನೂ ಓದಿ: ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.