ಬೆಂಗಳೂರು: ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವೆಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದೆ.


ಪೋಕರಿ ಅಧ್ಯಕ್ಷನನ್ನು ಸಮರ್ಥಿಸುತ್ತಾ ಸಿಇಟಿ ಪ್ರೊಫೆಸರ್ ಆಗಿದ್ದರು ಎಂದಿದ್ದೀರಿ. ಸಿಇಟಿ ಯುನಿವರ್ಸಿಟಿ ಇದೆಯೇ? ಎಲ್ಲಿದೆ? ಅಥವಾ ವಾಟ್ಸಾಪ್ ಯೂನಿವರ್ಸಿಟಿಯ ರೀತಿ ಅದೂ ನಿಮ್ಮ ಪ್ರೊಪೆಗಂಡಾ ಯುನಿವರ್ಸಿಟಿಯೇ? ಸ್ಪಷ್ಟಪಡಿಸಿ! ಇಲ್ಲದಲ್ಲಿ ಶಿಕ್ಷಣ ಇಲಾಖೆ ಶತಮೂರ್ಖರ ಕೈಯ್ಯಲ್ಲಿದೆ ಎಂದು ಒಪ್ಪಿಕೊಳ್ಳಿ’ ಎಂದು ಸಚಿವ ಬಿ.ಸಿ.ನಾಗೇಶ್ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೊಂದು ವಿವಾದಕ್ಕೆ ದಾರಿ ಮಾಡಿಕೊಡ್ತಾ ಸರ್ಕಾರ: ಹೆಡ್ಗೆವಾರ್ ಪಠ್ಯ ಸೇರಿಸಿದ್ರೆ ತಪ್ಪೇನು? ಎಂದ ಸಚಿವ ಬಿ.ಸಿ ನಾಗೇಶ್


ಪಠ್ಯಪುಸ್ತಕದಲ್ಲಿ ಸೇರಿಸಿದ ಸರ್ಕಾರಕ್ಕೆ ಕನಿಷ್ಠ ಮರ್ಯಾದೆಯೂ ಇಲ್ಲದಾಗಿದೆ. ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರಿಂದ "ದೇಶದ್ರೋಹಿ" ಬಿರುದು ಪಡೆದಿದ್ದ ಆತ. ದೇಶದ್ರೋಹಿಯೊಬ್ಬನ ಬರಹವನ್ನು ಪಠ್ಯದಲ್ಲಿ ಅಳವಡಿಸುವುದೂ ದೇಶದ್ರೋಹವಲ್ಲವೇ? ಇದಕ್ಕೆ ಬಿಜೆಪಿ ಸರ್ಕಾರ ಉತ್ತರಿಸುವುದೇ?’ ಎಂದು ಪ್ರಶ್ನಿಸಿದೆ.


'ಬಿ.ಸಿ.ನಾಗೇಶ್ ಅವರೇ ನಾನು ನಿಮ್ಮ ಹಾಗೆ ವಾಟ್ಸಪ್ ಯುನಿವರ್ಸಿಟಿಯ ವಿದ್ಯಾರ್ಥಿ ಅಲ್ಲ'


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.