ಬೆಂಗಳೂರು: ದಲಿತರನ್ನು ಬಿಜೆಪಿ ಏಕಿಷ್ಟು ಕೇವಲವಾಗಿ ಕಾಣುತ್ತಿದೆ? ಮನುವಾದವೇ ಬಿಜೆಪಿಯ ಪಕ್ಷದ ಬೈಲಾ ಆಗಿದೆಯೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಉಪಸಭಾಪತಿ ರುದ್ರಪ್ಪ ಲಮಾಣಿಯವರ ಮುಖದ ಮೇಲೆ ವಿಧೇಯಕಗಳ ಪ್ರತಿಗಳನ್ನು ಹರಿದು ಎಸೆದ ಬಿಜೆಪಿ ಶಾಸಕರ ವರ್ತನೆ ವಿಚಾರವಾಗಿ ಕಾಂಗ್ರೆಸ್ ಶುಕ್ರವಾರ ಟ್ವೀಟ್ ಮಾಡಿ ಕಿಡಿಕಾರಿದೆ.  


COMMERCIAL BREAK
SCROLL TO CONTINUE READING

‘ಬಿಜೆಪಿಗೆ ದಲಿತರ ರಾಜಕೀಯ ಹಾಗೂ ಸಾಮಾಜಿಕ ಏಳಿಗೆಯನ್ನು ಸಹಿಸಲಾಗುತ್ತಿಲ್ಲವೇ? ದಲಿತರ ತಲೆ ಮೇಲೆ ಚಡ್ಡಿ ಹೊರಿಸಿತ್ತು ಬಿಜೆಪಿ, SCP/TSP ಹಣವನ್ನು ದುರುಪಯೋಗ ಮಾಡಿತ್ತು ಬಿಜೆಪಿ, ದಲಿತರಿಗೆ ಮಾತ್ರ ಚಪ್ಪಲಿ ಕಾಯುವ ಟೆಂಡರ್ ಮೀಸಲಿಟ್ಟಿತ್ತು ಬಿಜೆಪಿ, ಸೆಂಟ್ರಲ್ ವಿಸ್ತಾ, ರಾಮಮಂದಿರದ ಕಾರ್ಯಕ್ರಮಕ್ಕೆ ದಲಿತ ಸಮುದಾಯದ ರಾಷ್ಟ್ರಪತಿಗೆ ಆಹ್ವಾನಿಸಲಿಲ್ಲ ಬಿಜೆಪಿ, ಈಗ ದಲಿತ ಸಮುದಾಯದ ಉಪಸಭಾಪತಿಯ ಮುಖಕ್ಕೆ ಪೇಪರ್ ಎಸೆದು ಅವಮಾನಿಸಿದೆ ಬಿಜೆಪಿ’ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.


ಬಗೆದಷ್ಟು ಬಯಲಾಗ್ತಿದೆ ಶಂಕಿತ ಉಗ್ರರ ʻಸ್ಫೋಟʼಕ ಜಾಲ


‘ಜಗತ್ತಿನೆದುರು ಭಾರತ ತಲೆ ತಗ್ಗಿಸುವಂತಹ ಘಟನೆಗಳು ಬಿಜೆಪಿ ಆಡಳಿತದ ಮಣಿಪುರದಲ್ಲಿ ಜರುಗುತ್ತಿದ್ದರೂ ಪ್ರಧಾನಿ ಮೋದಿಯವರಿಗೆ ಇದುವರೆಗೂ ಅಲ್ಲಿಗೆ ಭೇಟಿ ನೀಡಬೇಕೆಂದು ಮನಸಾಗಲಿಲ್ಲ. ಮಣಿಪುರದ ಬಗ್ಗೆ ತುಟಿ ಬಿಚ್ಚುಲು ಅತ್ಯಂತ ಹೇಯ ಕೃತ್ಯ ನಡೆಯಬೇಕಾಯ್ತು. ಗಲಭೆಗಳಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಂಡ ಮೋದಿಯವರಿಗೆ ಇದೆಲ್ಲಾ ಸಹಜ ಎನ್ನಿಸುತ್ತಿರಬಹುದೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.  


ಕಾಂಗ್ರೆಸ್‌ ಗೃಹಲಕ್ಷ್ಮೀಗೆ ಮೊದಲ ದಿನವೇ ಸಖತ್ ರೆಸ್ಪಾನ್ಸ್ .!


ಬಿಜೆಪಿ ನಾಯಕರ ನಡೆ ಖಂಡಿಸಿದ ರುದ್ರಪ್ಪ ಲಮಾಣಿ, ‘ನಾನು ದಲಿತನೆಂದ ಕಾರಣಕ್ಕೆ ಈ ರೀತಿ ನಡೆದುಕೊಳ್ಳುತ್ತಿದ್ದೀರಿ. ಇದು ಸರಿಯಲ್ಲ ಎಂದ ಅವರು, ಬಿಜೆಪಿ ಸದಸ್ಯರನ್ನು ಸದನದಿಂದ ಹೊರಹಾಕುವಂತೆ ಮಾರ್ಷಲ್‍ಗಳಿಗೆ ಸೂಚಿಸಿದ್ದರು. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ್ದಕ್ಕೆ 10 ಮಂದಿ ಬಿಜೆಪಿ ಶಾಸಕರನ್ನು ಯುಟಿ ಖಾದರ್ ಅಮಾನತು ಮಾಡಿದ್ದರು.   


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.