ಬೆಂಗಳೂರು: ಅತೀಹೆಚ್ಚು ಸುಳ್ಳು ಹೇಳಿದವರು ಯಾರು ಎಂಬ ಮಾನದಂಡಗಳನ್ನು ನಿಗದಿಪಡಿಸಿದರೆ ಬಿಜೆಪಿಯ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಾನದಂಡಗಳನ್ನಾಧರಿಸಿ ಮುಂಬರುವ 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿರ್ಧರಿಸಿರುವ ಬಿಜೆಪಿ ನಡೆಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
‘ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ನಿಗದಿಪಡಿಸಿರುವ ಮಾನದಂಡಗಳನ್ನು ಗಮನಿಸಿದರೆ ಬಿಜೆಪಿಗೆ ಅಭ್ಯರ್ಥಿಗಳ ತತ್ವಾರ ಉಂಟಾಗುವ ಗಂಭೀರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಬಿಜೆಪಿಗೆ ನುಡಿದಂತೆ ನಡೆದು ಅಭ್ಯಾಸವಿರಬೇಕಲ್ಲ?’ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಸಾಹಿತಿಗಳ ಕೂದಲು ಮುಟ್ಟಲು ಕಾಂಗ್ರೆಸ್ ಬಿಡುವುದಿಲ್ಲ.- ಬಿ ಕೆ ಹರಿಪ್ರಸಾದ್
‘ಟಿಕೆಟ್ ಪಡೆದುಕೊಳ್ಳಲು ಬಿಜೆಪಿ ಹೈಕಮಾಂಡ್ ನಿಗದಿಪಡಿಲು ಯೋಚಿಸುತ್ತಿರುವ ಮಾನದಂಡಗಳಾದ ಕಾರ್ಯವೈಖರಿ, ಜನರ ಸಮಸ್ಯೆಗೆ ಸ್ಪಂದಿಸುವ ಗುಣ ಮತ್ತು ಜನಪ್ರಿಯತೆಯ ಪರೀಕ್ಷೆಯಲ್ಲಿ ಆ ಪಕ್ಷಕ್ಕೆ ಸೇರಿದ ಯಾವೊಬ್ಬ ಹಾಲಿ ಶಾಸಕನಾದರೂ ಪಾಸಾಗಲು ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.
‘ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆಗಳ ಮಾನದಂಡದ ಮೂಲಕ ಬಿಜೆಪಿ ಸಚಿವರ ಟಿಕೆಟ್ ಪಡೆಯುವ ಅರ್ಹತೆಯನ್ನು ತೀರ್ಮಾನಿಸಲಿದೆಯಂತೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹಿಂದಿ ಹೇರಿಕೆಗೆ ಮುನ್ನುಡಿ ಬರೆದಿದ್ದೇ ಕಾಂಗ್ರೆಸ್: ಜೆಡಿಎಸ್
‘ಶೇ.40ಕ್ಕಿಂತ ಹೆಚ್ಚು ಕಮಿಷನ್ ಪಡೆದವರು, ಹಿಜಾಬ್, ಹಲಾಲ್, ಮೊದಲಾದ ವಿವಾದಗಳಿಂದ ಸಮಾಜದಲ್ಲಿ ಹೆಚ್ಚು ವೈಷಮ್ಯವನ್ನು ಹುಟ್ಟಿಸಿದವರು ಮತ್ತು ಅತೀ ಹೆಚ್ಚು ಸುಳ್ಳು ಹೇಳಿದವರು ಯಾರು ಎಂಬ ಮಾನದಂಡಗಳನ್ನು ನಿಗದಿಪಡಿಸಿದರೆ ಬಿಜೆಪಿಯ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತ’ ಅಂತಾ ಟೀಕಾಪ್ರಹಾರ ನಡೆಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.