ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಳಿಕ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಉಂಟಾಗಿದೆ. ಇದೇ ವಿಚಾರವಾಗಿ ಸ್ವಪಕ್ಷೀಯ ನಾಯಕರ ವಿರುದ್ಧವೇ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದರು. ಗ್ರಾಮ ಪಂಚಾಯ್ತಿ ಚುನಾವಣೆ ಗೆಲ್ಲಲಾಗದವರು ನಮಗೆ ಮಾರ್ಗದರ್ಶನ ಮಾಡ್ತಿದ್ರು ಅಂತಾ ಅವರು ಕಿಡಿಕಾರಿದ್ದರು.


COMMERCIAL BREAK
SCROLL TO CONTINUE READING

ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿರುವ ಕಾಂಗ್ರೆಸ್, ‘ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ! ಬಂಧನದಿಂದ ಹೊರಬರಬೇಕು ಎಂದರೆ ಆ "ಪಂಚೆ"ಯನ್ನು ಹರಿಯಲೇಬೇಕು! ದುಡಿಯದೆ, ಬೆವರು ಹರಿಸದೆ, ತಿರುಗದೆ, ನಾಲ್ಕು ಮತವನ್ನು ಗಳಿಸುವ ಶಕ್ತಿಯೂ ಇಲ್ಲದ ಆ 'ಸಂಘ'ಟನಾ ಕಾರ್ಯದರ್ಶಿಯ ವಿರುದ್ಧ ಮಾತನಾಡಿದ ಒಬ್ಬೇ ಒಬ್ಬ ವ್ಯಕ್ತಿ ಅಂದರೆ ಎಂ.ಪಿ.ರೇಣುಕಾಚಾರ್ಯ. ಬಿಜೆಪಿಯಲ್ಲಿ ಅವರು ಬದುಕುಳಿಯಲು ಸಾಧ್ಯವೇ ಎಂದು ಕಾದು ನೋಡಬೇಕು!’ ಅಂತಾ ಕುಟುಕಿದೆ.


ಅಸಮಾಧಾನ ಬಗ್ಗೆ ಬಹಿರಂಗ ಚರ್ಚೆ ಬೇಡ! ಕಮಲ ನಾಯಕರಿಗೆ ವರಿಷ್ಟರ ಕ್ಲಾಸ್


‘ಗ್ರಾಮ ಪಂಚಾಯ್ತಿ ಚುನಾವಣೆಗೆ ನಿಂತು ಗೆಲ್ಲಲಾಗದ ದೊಣ್ಣೆನಾಯಕರೊಬ್ಬರು RSSನ ದೊಣ್ಣೆ ತೋರಿಸಿ ಇಡೀ ಬಿಜೆಪಿಯನ್ನು ಅಲ್ಲಾಡಿಸುತ್ತಿದ್ದಾರೆ! ಬಿ.ಎಲ್.ಸಂತೋಷ್ ಅವರೇ, ರೇಣುಕಾಚಾರ್ಯರ ಈ ಮಾತನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಗ್ರಾಂಪಂ ಚುನಾವಣೆಗೆ ಸ್ಪರ್ಧಿಸಿ ಗೆದ್ದು ತೋರಿಸಿ! ನಿಮ್ಮ ದಮ್ಮು ತಾಕತ್ತು ನಿರೂಪಿಸಿ!’ ಎಂದು ಕಾಂಗ್ರೆಸ್ ಸವಾಲು ಹಾಕಿದೆ.


ಎಂ.ಪಿ.ರೇಣುಕಾಚಾರ್ಯ. ಬಸವರಾಜ್ ಬೊಮ್ಮಾಯಿಯವರೇ, ನಿಮ್ಮದೇ ಪಕ್ಷದ ರೇಣುಕಾಚಾರ್ಯರ ಈ ಮಾತುಗಳನ್ನು ಕೇಳಿ ತಾವು ತಲೆತಗ್ಗಿಸಿ ನಿಲ್ಲಬೇಕಿತ್ತು. ನಿಮಗೆ ಪಾಪಪ್ರಜ್ಞೆ ಕಾಡಬೇಕಿತ್ತು. ಅದು ಬಿಟ್ಟು ನಮ್ಮ ಅನ್ನಭಾಗ್ಯದ ಬಗ್ಗೆ ಕುಹುಕದ ಮಾತಾಡುತ್ತಿದ್ದೀರಿ ಎಂದರೆ ನಿರ್ಲಜ್ಜತನದ ಪರಮಾವಧಿಗೆ ತಲುಪಿದ್ದೀರಿ ಎಂದೇ ಅರ್ಥ’ ಅಂತಾ ಕಾಂಗ್ರೆಸ್ ಟೀಕಿಸಿದೆ.


ಇದನ್ನೂ ಓದಿ: “ಎಂದಿನಂತೆ ತಮ್ಮ ತಪ್ಪನ್ನು ಬೇರೆಯವರ ಮೇಲೆ ಹಾಕಿ ‘ಕೈ’ ತೊಳೆದುಕೊಳ್ಳುತ್ತಿದೆ”: ಕಮಲ ಟ್ವೀಟಾಸ್ತ್ರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.