ಬೆಂಗಳೂರು: ಕಾಂಗ್ರೆಸ್ ನಾಯಕರು ಬಳೆ ತೊಟ್ಟುಕೊಳ್ಳುವರೇ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್‍ಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ‘ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ’ ಎಂದು ಟೀಕಿಸಿದೆ.


COMMERCIAL BREAK
SCROLL TO CONTINUE READING

ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ವೇಳೆ ಬಳೆ ತೊಡಬಾರದು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ನಿಯಮಿಗಳ ವಿರುದ್ದ ಕಿಡಿಕಾರಿದ್ದ ನಳೀನ್, ಹಿಂದೂಗಳ ವಿರುದ್ಧ ಸದಾ ವಿಷಕಾರುವ ಕಾಂಗ್ರೆಸ್‌ ಸರ್ಕಾರದಿಂದ ಮತ್ತೊಂದು ದ್ವೇಷದ ಆದೇಶ ಹೊರಬಿದ್ದಿದೆ. ‘ಬಿಸಿಯೂಟ ಅಡುಗೆದಾರರುʼ ಕೈಗೆ ಬಳೆ ಧರಿಸಬಾರದು ಎಂದಿರುವ ಕಾಂಗ್ರೆಸ್ ನಾಯಕರು ಆ ಬಳೆಗಳನ್ನು ತಾವು ಧರಿಸಿಕೊಳ್ಳಬೇಕೆಂದಿದ್ದಾರೆಯೇ? ಎಂಬುದೇ ತಿಳಿಯುತ್ತಿಲ್ಲ. ಹಿಂದೂ ಆಚರಣೆಗಳನ್ನು ಹತ್ತಿಕ್ಕಬೇಕೆಂಬ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರ’ ಅಂತಾ ಟೀಕಿಸಿದ್ದರು.


ಇದನ್ನೂ ಓದಿ: ಒಂದಲ್ಲ, ಎರಡಲ್ಲ ಬರೋಬ್ಬರಿ 28 ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯೇ ಇಲ್ಲ..!


 ನಳೀನ್ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್, ‘ತಮ್ಮದೇ ಸರ್ಕಾರ ರೂಪಿಸುವ ನೀತಿ-ನಿಯಮಗಳ ಬಗ್ಗೆ ಅರಿವಿಲ್ಲದ ನಳೀನ್ ಕುಮಾರ್ ಕಟೀಲ್ ಅವರು ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ. ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಕೈಗೆ ಉಗುರುಬಣ್ಣ ಹಚ್ಚಬಾರದು, ಬಳೆ ತೊಟ್ಟಿರಬಾರದು ಎಂದು ಕೇಂದ್ರ ಸರ್ಕಾರ 2020ರಲ್ಲೇ ಆದೇಶ ಹೊರಡಿಸಿದೆ’ ಎಂದು ಸ್ಷಪ್ಟನೆ ನೀಡಿದೆ.


ನಳೀನ್ ಕುಮಾರ್ ಕಟೀಲ್ ಅವರೇ ಆ ಬಳೆಯನ್ನು ತಾವು ಧರಿಸಿಕೊಳ್ಳಲೆಂದು ಪ್ರಧಾನಿ ಮೋದಿಯವರು ಈ ಆದೇಶ ಹೊರಡಿಸಿದ್ದೇ? ಹಿಂದೂ ಆಚರಣೆಗಳನ್ನು ಹತ್ತಿಕ್ಕಲು ಈ ಕ್ರಮ ಕೈಗೊಂಡರೇ? ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ’ ಎಂದು ವ್ಯಂಗ್ಯವಾಡಿದೆ.


ಇದನ್ನೂ ಓದಿ: ಮುಂಗಡ ಟಿಕೆಟ್ ಬುಕಿಂಗ್ ಮಾಡಿದರೂ ಚಾರಣಕ್ಕಿಲ್ಲ ಅವಕಾಶ


https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK