ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ವೈ ಹೆಸರು: ಇದು ಬೊಮ್ಮಾಯಿ ಕುರ್ಚಿ ಕಸರತ್ತಿನ ರಾಜಕಾರಣ ಎಂದ ಕಾಂಗ್ರೆಸ್
ಶಿವಮೊಗ್ಗ ಜಿಲ್ಲೆಯ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೆಸರು ಅಂತಿಮಗೊಳಿಸಲಾಗಿದೆ.
ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುತ್ತಿರುವುದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಕುರ್ಚಿ ಕಸರತ್ತಿನ ರಾಜಕಾರಣವೆಂದು ಕಾಂಗ್ರೆಸ್ ಟೀಕಿಸಿದೆ.
ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಷ್ಟ್ರಕವಿ ಕುವೆಂಪು, ಜಿ.ಎಸ್.ಶಿವರುದ್ರಪ್ಪ, ಯು.ಆರ್ ಅನಂತಮೂರ್ತಿ, ಶಾಂತವೇರಿ ಗೋಪಾಲಗೌಡ, ಶಿವಪ್ಪ ನಾಯಕ, ಅಕ್ಕಮಹಾದೇವಿ, ಕೆಳದಿ ಚೆನ್ನಮ್ಮರಂತಹ ಸಾಧಕರು ಹಾಗೂ ಐತಿಹಾಸಿಕ ವ್ಯಕ್ತಿಗಳಿದ್ದರೂ ಸರ್ಕಾರಕ್ಕೆ ಅವರ ನೆನಪಾಗಲಿಲ್ಲವೇ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಕರ್ನಾಟಕಕ್ಕೆ ಇಂದು ಅರವಿಂದ ಕೇಜ್ರಿವಾಲ್ ಭೇಟಿ: ರಾಜ್ಯ ವಿಧಾನಸಭಾ ಚುನಾವಣೆಗೆ ಆಪ್ ಕಿಕ್ ಸ್ಟಾರ್ಟ್
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜೊತಗೆಗೆ ಮಾತನಾಡಿದ್ದ ಅವರು, ‘ಒಟ್ಟು 386 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ನಾಮಕರಣಕ್ಕೆ ಬೇರೆ ಬೇರೆ ಹೆಸರುಗಳ ಪ್ರಸ್ತಾವ ಬಂದಿದ್ದವು. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಯಡಿಯೂರಪ್ಪನವರು ಸಾಕಷ್ಟು ಶ‍್ರಮಿಸಿದ್ದಾರೆ. ಹೀಗಾಗಿ ಅವರ ಹೆಸರನ್ನೇ ಅಂತಿಮಗೊಳಿಸಲಾಗಿದೆ. ಇದಕ್ಕೆ ಸಂಪುಟ ಅನುಮೋದನೆ ನೀಡಿದ್ದು, ಕೇಂದ್ರದಿಂದಲೂ ಒಪ್ಪಿಗೆ ಸಿಗಲಿದೆ. ರನ್‍ವೇ ಕಾಮಗಾರಿ, ರಾತ್ರಿ ವೇಳೆ ವಿಮಾನ ಇಳಿಯುವ ಸೌಕರ್ಯ ಸೇರಿ ಕೆಲವು ಕೆಲಸಗಳಿಗೆ 60 ಕೋಟಿ ರೂ. ಅಗತ್ಯವಿದೆ. ಬಾಕಿ ಹಣ ತಕ್ಷಣ ಬಿಡುಗಡೆ ಮಾಡಲಾಗುವುದು. ಈ ವರ್ಷದ ಅಂತ್ಯದೊಳಗೆ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ’ ಎಂದು ಹೇಳಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಈಗ ದೇಶದಲ್ಲಿ ಮುಳುಗುತ್ತಿರುವ ಹಡಗು- ಬಿ.ಎಸ್. ಯಡಿಯೂರಪ್ಪ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.