ಬೆಂಗಳೂರು: ಹನಿ ಟ್ರಾಪ್ ಹನಿಗಳು ಸಿಎಂ ಕಚೇರಿಯಲ್ಲಿ ಬಿದ್ದಿದ್ದರ ಬಗ್ಗೆ ಬಸವರಾಜ ಬೊಮ್ಮಾಯಿಯವರು ಮಾತಾಡಬೇಕು ಎಂದು ಕಾಂಗ್ರೆಸ್ ಅಕ್ರೋಶ ವ್ಯಕ್ತಪಡಿಸಿದೆ.
‘ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಸರ್ಕಾರ ಕಳ್ಳಾಟದ ಹೇಳಿಕೆ ನೀಡುತ್ತಾ ದಿಕ್ಕುತಪ್ಪಿಸುತ್ತಿದೆ. ಚಿಲುಮೆ ಸಂಸ್ಥೆಯ ಅಕ್ರಮ ಬೆಳಕಿಗೆ ಬಂದಿರುವುದಕ್ಕೂ, ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಕಾಣೆಯಾಗಿರುವುದಕ್ಕೂ ಸಂಬಂಧವಿರುವುದು ನಿಶ್ಚಿತ. ಸಿಎಂ ಬಸವರಾಜ ಬೊಮ್ಮಾಯಿಯವರು ಉಡಾಫೆ ಉತ್ತರ ಕೊಟ್ಟು ಜಾರಿಕೊಳ್ಳಲು ಯತ್ನಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಹನಿ ಟ್ರಾಪ್ ಹನಿಗಳು ಸಿಎಂ ಕಛೇರಿಯಲ್ಲಿ ಬಿದ್ದಿದ್ದರ ಬಗ್ಗೆ @BSBommai ಅವರು ಮಾತಾಡಬೇಕು.
ಬಿಜೆಪಿ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂಬ ಆರೋಪಗಳು ಬಂದಿವೆ, ಈ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶವೇನು? ಇಂತಹ ಟ್ರಾಪ್‌ಗಳಿಂದ ಬೊಮ್ಮಾಯಿಯವರನ್ನು #PuppetCM ರೀತಿ ಆಟ ಆಡಿಸಲಾಗುತ್ತಿದೆಯೇ?
— Karnataka Congress (@INCKarnataka) November 19, 2022
‘ಹನಿ ಟ್ರಾಪ್ ಹನಿಗಳು ಸಿಎಂ ಕಛೇರಿಯಲ್ಲಿ ಬಿದ್ದಿದ್ದರ ಬಗ್ಗೆ ಬೊಮ್ಮಾಯಿಯವರು ಮಾತಾಡಬೇಕು. ಬಿಜೆಪಿ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂಬ ಆರೋಪಗಳು ಬಂದಿವೆ, ಈ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶವೇನು? ಇಂತಹ ಟ್ರಾಪ್‌ಗಳಿಂದ ಬೊಮ್ಮಾಯಿಯವರನ್ನು #PuppetCM ರೀತಿ ಆಟ ಆಡಿಸಲಾಗುತ್ತಿದೆಯೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಸರ್ಕಾರ ಕಳ್ಳಾಟದ ಹೇಳಿಕೆ ನೀಡುತ್ತಾ ದಿಕ್ಕುತಪ್ಪಿಸುತ್ತಿದೆ.
ಚಿಲುಮೆ ಸಂಸ್ಥೆಯ ಅಕ್ರಮ ಬೆಳಕಿಗೆ ಬಂದಿರುವುದಕ್ಕೂ, ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಕಾಣೆಯಾಗಿರುವುದಕ್ಕೂ ಸಂಬಂಧವಿರುವುದು ನಿಶ್ಚಿತ.
ಸಿಎಂ @BSBommai ಅವರು ಉಡಾಫೆ ಉತ್ತರ ಕೊಟ್ಟು ಜಾರಿಕೊಳ್ಳಲು ಯತ್ನಿಸುತ್ತಿದ್ದಾರೆ.
— Karnataka Congress (@INCKarnataka) November 19, 2022
ಇದನ್ನೂ ಓದಿ: Pradhan Mantri Fasal Bima Yojana: ಮುಂಗಾರು ಹಂಗಾಮಿನ ಬೆಳೆ ವಿಮೆ ಮಧ್ಯಂತರ ಪರಿಹಾರ ಬಿಡುಗಡೆ
‘ಉಚಿತ ಸೇವೆ’ಗೆ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇಕೆ?
ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆಯ ಕೆಲಸಗಾರರನ್ನು ಬಂಧಿಸಿ ಕಣ್ಣೊರೆಸುತ್ತಾ ಕಿಂಗ್ ಪಿನ್‌ಗಳ ರಕ್ಷಣೆಗೆ ನೀತಿರುವವರು ಯಾರು?
ಚಿಲುಮೆಗೆ ಯಾರ ಒಲುಮೆ?ಬರ್ತ್‌ಡೇ ಪಾರ್ಟಿಗೆ ಹೋಗಿದ್ದ ಕ್ಯಾಷ್‌ಲ್ಲೇ ಅಭಿವೃದ್ಧಿಯಾದ ಸಚಿವರೇ?
ಜನಕ್ರೋಶದಿಂದ ಖಾಲಿ ಕುರ್ಚಿ ದರ್ಶನ ಪಡೆಯುತ್ತಿರುವ ಬಿಜೆಪಿ ಮತದಾರರನ್ನೇ ಖಾಲಿ ಮಾಡಿಸುವ ಹುನ್ನಾರ ನಡೆಸಿದೆ.
— Karnataka Congress (@INCKarnataka) November 19, 2022
‘ಚಿಲುಮೆ ಸಂಸ್ಥೆಗೆ 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನಂದೀಶ್ ರೆಡ್ಡಿ ಕಡೆಯಿಂದ ಹಣ ಸಂದಾಯವಾಗಿದೆ. ಸಂಸ್ಥೆಯ ಮುಖ್ಯಸ್ಥನೊಂದಿಗೆ ಸಚಿವ ಅಶ್ವತ್ಥ್ ನಾರಾಯಣ್ ಅವರ ಸಂಪರ್ಕವಿದೆ. ಬಿಜೆಪಿಯ ನಾಯಕರೊಂದಿಗೆ ಚಿಲುಮೆ ಸಂಸ್ಥೆಗೆ ನೇರ ಸಂಪರ್ಕವಿರುವುದು ಜಗಜ್ಜಾಹೀರು. ಹೀಗಿರುವಾಗ ಅದೇ ಸಂಸ್ಥೆಯ "ಉಚಿತ ಸೇವೆ"ಗೆ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇಕೆ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
‘ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆಯ ಕೆಲಸಗಾರರನ್ನು ಬಂಧಿಸಿ ಕಣ್ಣೊರೆಸುತ್ತಾ ಕಿಂಗ್ ಪಿನ್‌ಗಳ ರಕ್ಷಣೆಗೆ ನೀತಿರುವವರು ಯಾರು? ಚಿಲುಮೆಗೆ ಯಾರ ಒಲುಮೆ? ಬರ್ತ್‌ಡೇ ಪಾರ್ಟಿಗೆ ಹೋಗಿದ್ದ ಕ್ಯಾಷ್‌ಲ್ಲೇ ಅಭಿವೃದ್ಧಿಯಾದ ಸಚಿವರೇ? ಜನಕ್ರೋಶದಿಂದ ಖಾಲಿ ಕುರ್ಚಿ ದರ್ಶನ ಪಡೆಯುತ್ತಿರುವ ಬಿಜೆಪಿ ಮತದಾರರನ್ನೇ ಖಾಲಿ ಮಾಡಿಸುವ ಹುನ್ನಾರ ನಡೆಸಿದೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಇದನ್ನೂ ಓದಿ: ಬಡ ಮಕ್ಕಳ ಹಾಲಿಗೂ ಕನ್ನ : ʼಕ್ಷೀರಭಾಗ್ಯʼ ಕಾಳಸಂತೆಯಲ್ಲಿ ಮಾರಾಟ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.