ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ: ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಗುಡುಗು!
ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬೆಂಗಳೂರು: PSI ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ’ ಎಂದು ಕಾಂಗ್ರೆಸ್ ಕುಟುಕಿದೆ.
ಇದನ್ನೂ ಓದಿ: ಆಸಿಡ್ ದಾಳಿಗೊಳಗಾದ ಮಹಿಳೆಗೆ ಸರ್ಕಾರಿ ಕೆಲಸ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ
‘PSI ಹಗರಣದದಿಂದ ಸಂತ್ರಸ್ತರಾಗಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ ಆರಗ ಜ್ಞಾನೇಂದ್ರ ಅವರೇ? ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಅಕ್ರಮ ನೇಮಕಾತಿಗಳು ಖಾಲಿ ಪೇಪರ್‌ನಲ್ಲಿಯೇ ನಡೆಯುತ್ತವೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: 25ಕ್ಕೂ ಹೆಚ್ಚು ಜನರ ಬಂಧನ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.