ಬೆಂಗಳೂರು: ಪ್ರಧಾನಿ ಮೋದಿಯವರು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿದ ಬಳಿಕ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ರಾಜ್ಯ ಬಿಜೆಪಿ ನಾಯಕರನ್ನು ತಮ್ಮ ಹತ್ತಿರಕ್ಕೂ ಬಿಟ್ಟುಕೊಂಡಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವ ಮುನಿರತ್ನ ಸೇರಿದಂತೆ ಇನ್ನುಳಿದ ಬಿಜೆಪಿ ನಾಯಕರು ಜನಸಮಾನ್ಯರಂತೆ ರಸ್ತೆ ಬದಿ ನಿಂತು ಪ್ರಧಾನಿ ಮೋದಿಯವರಿಗೆ ಕೈಬಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಫೋಟೋವನ್ನು ಹಂಚಿಕೊಂಡು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಬಂದಿರುವ ದುಸ್ಥಿತಿ ಬಗ್ಗೆ ವ್ಯಂಗ್ಯವಾಡಿದೆ. ‘ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ. ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಪ್ರಧಾನಿ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ?’ ಎಂದು ಪ್ರಶ್ನಿಸಿದೆ.


ಮಧುರೈನಲ್ಲಿ ಸ್ಟೇಷನರಿ ಕೋಚ್‌ನಲ್ಲಿ ಕಾಣಿಸಿಕೊಂಡ ಬೆಂಕಿ


‘ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಪ್ರಧಾನಿ ಮೋದಿಯವರ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ! ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ’ ಎಂದು ಮೋದಿ ರೋಡ್ ಶೋವನ್ನು ವೀಕ್ಷಿಸಲು ಜನರೊಂದಿಗೆ ಬಿಜೆಪಿ ನಾಯಕರು ರಸ್ತೆ ಬದಿ ನಿಂತಿರುವ ಫೋಟೋವನ್ನು ಕಾಂಗ್ರೆಸ್ ಹಂಚಿಕೊಂಡಿದೆ.


ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ ಬಿಜೆಪಿ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ಮೋದಿ ಸಂತಸ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.