ಬೆಂಗಳೂರು: ವಾಣಿಜ್ಯ ಮತ್ತು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿರುವುದರಿಂದ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.
‘ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 350 ರೂ. ಏರಿಕೆ ಮತ್ತು ಗೃಹಬಳಕೆಯ ಸಿಲಿಂಡರ್ ಬೆಲೆ 50 ರೂ. ಏರಿಕೆ. ಅಚ್ಛೆ ದಿನಗಳಲ್ಲಿ ಅನ್ನ ಬೇಯಿಸಿ ತಿನ್ನುವುದೂ ಕೂಡ "ಐಷಾರಾಮಿ ಜೀವನ" ಎನ್ನುವ ಸ್ಥಿತಿಗೆ ತಂದಿಟ್ಟಿದ್ದಕ್ಕೆ #ThankYouModi !! ಮೊದಲು ಹೊಗೆಯಿಂದ ಕಣ್ಣೀರು ಬರ್ತಿತ್ತು, ಈಗ ಸಿಲಿಂಡರ್ ಕೂಡ ಕಣ್ಣೀರು ತರಿಸುತ್ತಿದೆ ಅಲ್ಲವೇ ಬಿಜೆಪಿ?’ ಎಂದು ಕಾಂಗ್ರೆಸ್ ಕುಟುಕಿದೆ.
🔥ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ₹350 ಏರಿಕೆ
🔥ಗೃಹಬಳಕೆಯ ಸಿಲಿಂಡರ್ ಬೆಲೆ ₹50 ಏರಿಕೆ
ಅಚ್ಛೆ ದಿನಗಳಲ್ಲಿ ಅನ್ನ ಬೇಯಿಸಿ ತಿನ್ನುವುದೂ ಕೂಡ "ಐಷಾರಾಮಿ ಜೀವನ" ಎನ್ನುವ ಸ್ಥಿತಿಗೆ ತಂದಿಟ್ಟಿದ್ದಕ್ಕೆ #ThankYouModi !!
ಮೊದಲು ಹೊಗೆಯಿಂದ ಕಣ್ಣೀರು ಬರ್ತಿತ್ತು, ಈಗ ಸಿಲಿಂಡರ್ ಕೂಡ ಕಣ್ಣೀರು ತರಿಸುತ್ತಿದೆ ಅಲ್ಲವೇ @BJP4Karnataka? pic.twitter.com/2zDXnNsZKu
— Karnataka Congress (@INCKarnataka) March 1, 2023
ಇದನ್ನೂ ಓದಿ: ಇಂದಿನಿಂದ ಸರ್ಕಾರಿ ನೌಕರರ ಪ್ರೊಟೆಸ್ಟ್- ಜನಸಾಮಾನ್ಯರ ಮೇಲೆ ಡೈರೆಕ್ಟ್ ಎಫೆಕ್ಟ್
‘ಪ್ರಧಾನಿ ಮೋದಿಯವರು ಒಮ್ಮೆ ಕೈಬೀಸಿ ಹೋದರೆಂದರೆ ಜನತೆ ಬರೆ ಎಳೆದು ಹೋದರು ಎಂದೇ ಅರ್ಥ! ಗೃಹಬಳಕೆಯ ಸಿಲಿಂಡರ್ ದರ ಇಂದಿನಿಂದ ಮತ್ತೆ 50 ರೂ. ಏರಿಕೆಯಾಗಿದೆ. ಮೋದಿಜಿಯ ಅಚ್ಛೆ ದಿನಗಳಲ್ಲಿ ಜನರು ಕಾಡುಮೇಡು ಅಲೆದು ಗೆಡ್ಡೆಗೆಣಸು ತಿಂದು ಬದುಕುವ ಹಂತಕ್ಕೆ ಬರುವುದು ನಿಶ್ಚಿತ. ಈ ಅಮಾನವೀಯ ಬೆಲೆ ಏರಿಕೆಯಲ್ಲಿ ನೆರವು ನೀಡಲೆಂದೇ ನಮ್ಮ #GruhaLakshmi ಯೋಜನೆಯಯಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ಮೋದಿಯವರು ಒಮ್ಮೆ ಕೈಬೀಸಿ ಹೋದರೆಂದರೆ ಜನತೆ ಬರೆ ಎಳೆದು ಹೋದರು ಎಂದೇ ಅರ್ಥ!
ಗೃಹಬಳಕೆಯ ಸಿಲಿಂಡರ್ ದರ ಇಂದಿನಿಂದ ಮತ್ತೆ ₹50 ಏರಿಕೆಯಾಗಿದೆ.
ಮೋದಿಜಿಯ ಅಚ್ಛೆ ದಿನಗಳಲ್ಲಿ
ಜನರು ಕಾಡುಮೇಡು ಅಲೆದು ಗೆಡ್ಡೆಗೆಣಸು ತಿಂದು ಬದುಕುವ ಹಂತಕ್ಕೆ ಬರುವುದು ನಿಶ್ಚಿತ.ಈ ಅಮಾನವೀಯ ಬೆಲೆ ಏರಿಕೆಯಲ್ಲಿ ನೆರವು ನೀಡಲೆಂದೇ
ನಮ್ಮ #GruhaLakshmi ಯೋಜನೆ— Karnataka Congress (@INCKarnataka) March 1, 2023
BSYರನ್ನು ವಿಸರ್ಜನಾ ಮೂರ್ತಿ ಮಾಡಲಿದೆ BJP!
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿ.ಎಲ್.ಸಂತೋಷರ ಮುಖ ತೋರಿಸಿದರೆ 4 ಮತಗಳು ಸಿಗುವುದಿಲ್ಲವೆಂಬ ವಾಸ್ತವ ಸಂಗತಿ ಅರಿವಾಗುತ್ತಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಉತ್ಸವ ಮೂರ್ತಿ ಮಾಡಲು ಹೊರಟಿರುವ ಇದೇ ಬಿಜೆಪಿ ಹಿಂದೆ BSYರನ್ನು ಹೇಗೆಲ್ಲಾ ನಡೆಸಿಕೊಂಡಿತ್ತು ಎಂಬುದನ್ನು ಜನತೆ ನೋಡಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆಯೇ BSY ಎಂಬ ಉತ್ಸವ ಮೂರ್ತಿಯನ್ನು ಬಿಜೆಪಿ ವಿಸರ್ಜನಾ ಮೂರ್ತಿ ಮಾಡಲಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ಇದನ್ನೂ ಓದಿ: ಇಂದಿನಿಂದ ಬಿಜೆಪಿ ರಥಯಾತ್ರೆ- ಮಲೆ ಮಹದೇಶ್ವರ ಬೆಟ್ಟದಿಂದ ಜೆಪಿ ನಡ್ಡಾ ಚಾಲನೆ
ಇಂದು ಬಿ.ಎಸ್.ಯಡಿಯೂರಪ್ಪನವರ ಕಾಲು ಹಿಡಿಯುತ್ತಿರುವ ಬಿಜೆಪಿ ಕಣ್ಣೀರು ಹಾಕಿಸಿ ಅವರಿಂದ ಅಧಿಕಾರ ಕಿತ್ತುಕೊಂಡಿದ್ದೇಕೆ ಎಂಬುದನ್ನು ಉತ್ತರಿಸಲಿ. ಅವಧಿ ಪೂರೈಸುತ್ತೇನೆ ಎನ್ನುತ್ತಿದ್ದ BSY ಇದ್ದಕ್ಕಿದ್ದಂತೆ ದೆಹಲಿಗೆ ಹೋಗಿ ಬಂದು ರಾಜೀನಾಮೆ ಕೊಟ್ಟಿದ್ದೇಕೆ? ಮತ್ತು ಕಣ್ಣೀರು ಹಾಕಿ ಗೋಳಾಡಿದ್ದೇಕೆ? ಇವು ಇಂದಿಗೂ ಸಿಗದ ಉತ್ತರದ ಪ್ರಶ್ನೆಗಳು’ ಎಂದು ಟ್ವೀಟ್ ಮಾಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.