ಬೆಂಗಳೂರು: ಈ ದಶಕದ ಅತಿದೊಡ್ಡ ಹಗರಣ ಪಿಎಂ ಕೇರ್ ಫಂಡ್ ಬಗ್ಗೆ ಯಾಕೆ ತುಟಿ ಬಿಚ್ಚುವುದಿಲ್ಲ?ವೆಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ. ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.)ದ ವಿಚಾರಣೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.   


COMMERCIAL BREAK
SCROLL TO CONTINUE READING

‘ಮುಗಿದಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುನ್ನೆಲೆಗೆ ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿರುವ ಬಿಜೆಪಿ, ಈ ದಶಕದ ಅತಿದೊಡ್ಡ ಹಗರಣ ಪಿಎಂ ಕೇರ್ ಫಂಡ್ ಬಗ್ಗೆ ಯಾಕೆ ತುಟಿ ಬಿಚ್ಚುವುದಿಲ್ಲ? ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಯಾವಾಗ ED ನೋಟಿಸ್ ತಲುಪಲಿದೆ? ಜನರ ಹಣದ ಸರಿಯಾದ ಲೆಕ್ಕ ಯಾವಾಗ ಬಹಿರಂಗ ಪಡಿಸುತ್ತೀರಿ?’ ಎಂದು ಪ್ರಶ್ನಿಸಿದೆ.


ಅಸಲಿ ಗಾಂಧಿ ಸೇರಿ ಎಲ್ಲವನ್ನೂ ಹೈಜಾಕ್ ಮಾಡಿರುವ ಕಾಂಗ್ರೆಸ್ ಅಸ್ತಿತ್ವವೇ ಶೂನ್ಯ: ಬಿಜೆಪಿ


‘ರಫೆಲ್ ಹಗರಣ ಮುಚ್ಚಿ ಹಾಕಲಾಗುತ್ತದೆ, ಫೈಲ್‌ಗಳು ಕಳೆದುಹೋಗುತ್ತವೆ! ಪಿಎಂ ಕೇರ್ಸ್ ಹಗರಣದ ತನಿಖೆಯೇ ನಡೆಯುವುದಿಲ್ಲ, ಜನರ ಹಣ ಲೂಟಿ ಹೊಡೆಯಲಾಗುತ್ತದೆ! ಶವಪೆಟ್ಟಿಗೆ ಹಗರಣದ ಪ್ರಮುಖ ಆರೋಪಿಗಳನ್ನು ಬಚಾವು ಮಾಡಲಾಗುತ್ತದೆ! ಸಿಎಂ ಹುದ್ದೆಗೆ 2,500 ಕೋಟಿ ರೂ. ತನಿಖೆಯೇ ಆಗುವುದಿಲ್ಲ! ಲೂಟಿಯೇ ಬಿಜೆಪಿ ಧರ್ಮ!’ ಎಂದು ಕಾಂಗ್ರೆಸ್ ಕುಟುಕಿದೆ.


ಬಿಜೆಪಿ ಸರ್ಕಾರದ ವಿರುದ್ಧ ಹೋರಾಟವು ಮತ್ತೊಮ್ಮೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ದದ ಹೋರಾಟವನ್ನು ನೆನಪಿಸುತ್ತಿದೆ. ಹೋರಾಡುತ್ತೇವೆ, ದೇಶವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ಮುಕ್ತಗೊಳಿಸುತ್ತೇವೆ, ಆ ಬದ್ಧತೆ ನಮಗಿದೆ. ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.


ಮೇಕೆದಾಟು ಬಗ್ಗೆ ಪ್ರಧಾನಿಗೆ ಪತ್ರ ಬರೆದಿರುವುದು ರಾಜಕೀಯ ಸ್ಟಂಟ್: ಸಿಎಂ ಬೊಮ್ಮಾಯಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.