ಬೆಂಗಳೂರು: ರೈತರಿಗೆ ನೀಡುವ ಸಬ್ಸಿಡಿಯಲ್ಲಿ ಕಮಿಷನ್ ಪಡೆದಿರುವ ಆರೋಪ ಮಾಡಿ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಚಾಮರಾಜನಗರ ಜಿಲ್ಲಾ ಹನಿ ನೀರಾವರಿ ವಿತರಕರ ಸಂಘದಿಂದ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ. ಇದೇ ವಿಚಾರವಾಗಿ ಪ್ರಧಾಜಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದ್ದು, ‘‘ನಾ ಖಾನೆದುಂಗಾ’ ಎನ್ನುತ್ತಿದ್ದ ಪ್ರಧಾನಿಗಳು ‘ನಾ ಬಾತ್ ಕರೂಂಗಾ’ ಎಂಬಂತೆ ಮೌನ ವಹಿಸಿದ್ದಾರೆಂದು ಟೀಕಿಸಿದೆ.
‘ಮಾನ್ಯ ಪ್ರಧಾನಿಗಳೇ ಹಿಂದೊಮ್ಮೆ ಸಚಿವ ಮುನಿರತ್ನರನ್ನು ಭ್ರಷ್ಟ ಎಂದು ಹೇಳಿದ್ದಿರಿ, ಈಗ ನಿಮ್ಮ ಹೇಳಿಕೆಗೆ ಪೂರಕವೆಂಬಂತೆ ಅವರ ವಿರುದ್ಧದ ದೂರು ನಿಮ್ಮ ಮುಂದಿದೆ. 'ನಾ ಖಾನೆದುಂಗಾ' ಎನ್ನುತ್ತಿದ್ದ ತಾವು ಈಗ ಕೈಗೊಳ್ಳುವ ಕ್ರಮವೇನು? ಭ್ರಷ್ಟಾಚಾರಕ್ಕೆ ಹಾಗೂ 40% ಕಮಿಷನ್‌ಗೆ ಬೆಂಬಲಿಸುತ್ತೀರಾ? ಕ್ರಮ ಕೈಗೊಳ್ಳುವಿರಾ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ: ‘ಭ್ರಷ್ಟರಿಗೆ ರಕ್ಷೆ, ಜನರಿಗೆ ಶಿಕ್ಷೆ’ ಇದೇ ಬಿಜೆಪಿ ಸರ್ಕಾರದ ಧ್ಯೇಯ ವಾಕ್ಯ!: ಕಾಂಗ್ರೆಸ್
‘ತೋಟಗಾರಿಕಾ ಸಚಿವ ಮುನಿರತ್ನರವರ ಕಮಿಷನ್ ಲೂಟಿಯ ಬಗ್ಗೆ ಪ್ರಧಾನಿಗೆ ಪತ್ರ ತಲುಪಿದೆ, ನಿಮಗೂ ಬರಲಿಲ್ಲವೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರೇ? ಹನಿ ನೀರಾವರಿ ವಿತರಕರ ಸಂಘ ನಿಮಗೆ ಪತ್ರ ಬರೆದಿದ್ದರೂ ಕ್ರಮ ಕೈಗೊಳ್ಳದ ತಾವು ಭ್ರಷ್ಟಾಚಾರದ ರಕ್ಷಕನಂತೆ ನಿಂತಿದ್ದೀರಿ. ಈ ಆರೋಪಕ್ಕೆ ತನಿಖೆ ನಡೆಸಿ 'ಪಾರದರ್ಶಕತೆ' ನಿರೂಪಿಸುತ್ತೀರಾ?’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಮಾನ್ಯ ಪ್ರಧಾನಿಗಳೇ,
ಹಿಂದೊಮ್ಮೆ ಸಚಿವ ಮುನಿರತ್ನರನ್ನು ಭ್ರಷ್ಟ ಎಂದು ಹೇಳಿದ್ದಿರಿ, ಈಗ ನಿಮ್ಮ ಹೇಳಿಕೆಗೆ ಪೂರಕವೆಂಬಂತೆ ಅವರ ವಿರುದ್ಧ ದೂರು ನಿಮ್ಮ ಮುಂದಿದೆ.'ನಾ ಖಾನೆದುಂಗಾ' ಎನ್ನುತ್ತಿದ್ದ ತಾವು ಈಗ ಕೈಗೊಳ್ಳುವ ಕ್ರಮವೇನು?
ಭ್ರಷ್ಟಾಚಾರಕ್ಕೆ ಹಾಗೂ 40% ಕಮಿಷನ್‌ಗೆ ಬೆಂಬಲಿಸುತ್ತೀರಾ? ಕ್ರಮ ಕೈಗೊಳ್ಳುವಿರಾ?#BJPCorruptionFiles
— Karnataka Congress (@INCKarnataka) July 17, 2022
‘40% ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿಗೆ ಮತ್ತೊಂದು ಪತ್ರ ಬರೆಯಲಾಗಿದೆ. ಬಿಜೆಪಿ ಸರ್ಕಾರದ ಭ್ರಷ್ಟರ ವಿರುದ್ಧದ ಪತ್ರಗಳಿಂದಲೇ ಪ್ರಧಾನಿ ಕಚೇರಿಯ 'ಡ್ರಾಪ್ ಬಾಕ್ಸ್' ತುಂಬಲಿದೆ. 'ನಾ ಖಾನೆದುಂಗಾ' ಎನ್ನುತ್ತಿದ್ದ ಪ್ರಧಾನಿಗಳು ಇಷ್ಟೆಲ್ಲ ಪತ್ರಗಳು ಹೋದರೂ 'ನಾ ಬಾತ್ ಕರೂಂಗಾ' ಎಂಬಂತೆ ಮೌನ ವಹಿಸಿದ್ದಾರೆ’ ಎಂದು ಕಾಂಗ್ರೆಸ್ ಕುಟುಕಿದೆ.
ಇದನ್ನೂ ಓದಿ: PSI recruitment scam: ಅಮೃತ್ ಪೌಲ್ ಆಸ್ತಿ ಎಷ್ಟಿದೆ? ಇಲ್ಲಿದೆ ನೋಡಿ ಡಿಟೇಲ್ಸ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.