ಮುಂಬರುವ ಚುನಾವಣೆಗೆ ಕಾಂಗ್ರೆಸ್ ಕಾರ್ಯತಂತ್ರ..

ಸಾಮಾಜಿಕ ಜಾಲತಾಣದ ಮೂಲಕ, ಜನರಿಗೆ ಜಾಗೃತಿ ಮೂಡಿಸುವ ಕಾರ್ಯದ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಚರ್ಚೆ.

Last Updated : Sep 16, 2017, 01:08 PM IST
ಮುಂಬರುವ ಚುನಾವಣೆಗೆ ಕಾಂಗ್ರೆಸ್ ಕಾರ್ಯತಂತ್ರ.. title=
Pic: Twitter

ಬೆಂಗಳೂರು: ಸರ್ಕಾರದ ಸಾಧನೆ, ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳು, ಕಾಂಗ್ರೆಸ್ ಸಿದ್ಧಾಂತದ ಕಾರ್ಯವೈಖರಿ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದ ಕುರಿತು ಕಾಂಗ್ರೇಸ್ ವಿವಿಧ ವಿಭಾಗಗಳ ಜೊತೆ ಸೇರಿ ಕಾರ್ಯತಂತ್ರ ರೂಪಿಸುತ್ತಿದೆ. 

ಕೆಪಿಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಐಟಿ ವಿಭಾಗ, ಸಾಮಾಜಿಕ ಜಾಲತಾಣ, ಕೆಪಿಸಿಸಿ ಮಾಧ್ಯಮ ವಿಭಾಗದ ಜೊತೆ ಸಭೆ‌ ಕರೆಯಲಾಗಿದೆ. ಸಭೆಯಲ್ಲಿ ಸರ್ಕಾರದ ಸಾಧನೆ, ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳು, ಕಾಂಗ್ರೆಸ್ ಸಿದ್ಧಾಂತದ ಕಾರ್ಯವೈಖರಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಬಿಜೆಪಿ ತಂತ್ರದ ಪ್ರತಿತಂತ್ರದ ಕುರಿತು ಕೂಡ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್, ಎಸ್.ಆರ್.ಪಾಟೀಲ್ ಸೇರಿದಂತೆ ಹಲವರು ಭಾಗಿ‌ಯಾಗಿದ್ದಾರೆ.

Trending News