ಗದಗ: ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಹೀಗಿದ್ದರೂ ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ  ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಅಂತಾ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಆಕ್ಷೇಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲೀಮರಲ್ಲೂ  ಚಪ್ಪರಬಂದ್, ನದಾಫ್, ಪಿಂಜಾರ್  ಸೇರಿದಂತೆ 24 ಜಾತಿಯವರು ಬಹಳ ಹಿಂದುಳಿದವರಿದ್ದಾರೆ. ಅವುಗಳಿಗೆ ಈಗಾಗಲೇ  2ಎ ಯಲ್ಲಿ‌ ಮೀಸಲಾತಿ ಇದೆ. ಅವರಿಗೆ ಹೆಚ್ಚುವರಿಯಾಗಿ ಶೇ 4 ಪರ್ಸೆಂಟ್ ಮೀಸಲಾತಿ ಕೊಟ್ಟಿದ್ದರು. ಅದನ್ನೇ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪ ಮಾಡಿದೆ. ಈಗ ಆ ಕೇಸ್ ಸುಪ್ರೀಂ ಕೋರ್ಟಿನಲ್ಲಿದೆ ನೋಡೋಣ ಎಂದರು.


ಇದನ್ನೂ ಓದಿ: ಠೇವಣಿ ಹಣ ಹಿಂದಿರುಗಿಸದ ಅರ್ಬನ್ ಕ್ರೆಡಿಟ್ ಸೊಸೈಟಿಗೆ ಪರಿಹಾರ ನೀಡಲು ಆದೇಶ 


ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಮರು ಹಂಚಿಕೆ ಮಾಡುತ್ತಾರೆ ಎನ್ನುವ ಮಾತಿಗೆ ಪ್ರತಿಕ್ರಿಯಿಸಿದ ಅವರು, ಆಸ್ತಿ ಕೇಳುವುದಕ್ಕೆ ಬಹಳ ಚನ್ನಾಗಿ ಅನಿಸುತ್ತದೆ. ಆದರೆ, ಯಾರದ್ದು ಕಿತ್ತುಕೊಂಡು ಯಾರಿಗೆ ಕೊಡುತ್ತಾರೆ ?  ಏನ್ ಸರ್ವೆ ಮಾಡುತ್ತಾರೆ. ಚುನಾವಣೆ ಸಂದರ್ಭದಲ್ಕಿ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಬಾರದು. ಕಾಂಗ್ರೆಸ್ ನೀತಿ ಇದ್ದಲ್ಲಿ‌ ಸ್ಪಷ್ಟವಾಗಿ ಹೇಳವೇಕು. ಸಂವಿಧಾನದಲ್ಲಿ ವಾಕ್ ಸ್ವಾತಂತ್ರದ ಹಾಗೆ ಆಸ್ತಿ ಮಾಡುವ ಹಕ್ಕೂ ಇದೆ. ಕಾಂಗ್ರೆಸ್ ನವರು ಸಂವಧಾನದ ವಿರುದ್ಧ ಕೆಲಸ ಮಾಡಿತ್ತಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಹೀಗೆ ಮಾತ್ನಾಡಬಾರದು ಎಂದರು. ಕಾಂಗ್ರೆಸ್ ‌ಮನಸ್ಥಿತಿ ಹುಬ್ಬಳ್ಳಿ ಕಾಲೇಜ್ ಯುವತಿ ನೇಹಾ ಹತ್ಯೆ ಪ್ರಕರಣ ಸಾಮಾನ್ಯ ಎಂದಿದ್ದ ಸಚಿವ ಶಿವಾನಂದ ಪಾಟೀಲ ಅವರ  ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಆಕ್ರೋಶ ವ್ಯಕ್ತಪಡಿಸಿದರು.


ಸಚಿವ ಶಿವಾನಂದ ಪಾಟೀಲ ಹೇಳಿಕೆ ಕಾಂಗ್ರೆಸ್ ನ ಮನಸ್ಥಿತಿಯನ್ನು ತೋರಿಸುತ್ತದೆ. ಕೊಲೆ ಮಾಡಿದವ ಅಲ್ಪ ಸಂಖ್ಯಾತನಿದ್ದಾನೆ. ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ಪ್ರಕರಣವನ್ನ ಕಾಂಗ್ರೆಸ್ ನೋಡುತ್ತಿದೆ. ಈ ಪ್ರಕರಣವನ್ನು ಗೌಣ ಮಾಡುವುದಕ್ಕಾಗಿ ಈ ಥರದ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ನೋವುಂಟು ಮಾಡುವ ಕೆಲಸ. ಇಂಥ ಹೇಳಿಕೆ ನೇಹಾ ಕಳೆದುಕೊಂಡು ನೋವಿನಲ್ಲಿರುವ ಕುಟುಂಬಕ್ಕೂ ನೋವು ತರುತ್ತದೆ. ಶಿವಾನಂದ ಪಾಟೀಲ್ ಅವರು ಯಾವಾಗಲೂ ಹೀಗೆ ಮಾತನಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಇಂಥವರೇ ಬೇಕಾಗಿದ್ದಾರೆ ಎಂದು ಹೇಳಿದರು. ಇದೇ ವೇಳೆ, ಚಂಬು, ಅಕ್ಷಯ ಪಾತ್ರೆಯ ಮಧ್ಯೆ. ಪ್ರಧಾನಿ ನರೇಂದ್ರ ಮೋದಿ ಅವರ  ಅಕ್ಷಯ ಪಾತ್ರೆ ಬಗ್ಗೆ ಜನರ ಒಲವಿದೆ ಎಂದು ಹೇಳಿದರು.


ಇದನ್ನೂ ಓದಿ: ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.