ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಒಳಪಡುವ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಕೊನೆಗೂ ಕೈ ವರಿಷ್ಠರು ಟಿಕೆಟ್ ಅಂತಿಮಗೊಳಿಸಿದ್ದು ಸಚಿವ ಎಚ್.ಸಿ‌.ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಟಿಕೆಟ್ ಖಾತ್ರಿಯಾಗಿದೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ಈ ಬಗ್ಗೆ ಖಚಿತಪಡಿಸಿದ್ದು, ಸಚಿವ ಎಚ್.ಸಿ.ಮಹಾದೇವಪ್ಪ ಅವರು ಪಟ್ಟು ಬಿಡದೇ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಿದ್ದು ಇಂದು ಸಂಜೆ ಇಲ್ಲವೇ ಮಂಗಳವಾರದಂದು ಅಧಿಕೃತವಾಗಿ ಘೋಷಣೆಯಾಗಲಿದೆ ಎಂದಿದ್ದಾರೆ. 


ಇದನ್ನೂ ಓದಿ- Lok Sabha Election 2024: ದಾಖಲೆಯಿಲ್ಲದ 32 ಕೋಟಿ ರೂ. ಮೌಲ್ಯದ ವಸ್ತುಗಳು ಜಪ್ತಿ..!


ಮಾ.28 ರಿಂದ ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಸುನೀಲ್ ಬೋಸ್ ಅಧಿಕೃತವಾಗಿ ತಮ್ಮ ಪ್ರಚಾರ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದ್ದು ಬಳಿಕ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಕಾರ್ಯಕರ್ತರ ಸಭೆಯನ್ನು ನಡೆಸಲಿದ್ದಾರೆ. 


ಅಪ್ಪನ ಬಳಿಕ ಲೋಕ ಅಖಾಡಕ್ಕೆ ಮಗ: 
ಸಚಿವ ಎಚ್.ಸಿ.ಮಹಾದೇವಪ್ಪ ಕೂಡ ಈ ಹಿಂದೆ 1991 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಈಗ ಪುತ್ರ ಅಪ್ಪನ ಬಳಿಕ ಲೋಕ ಅಖಾಡಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗಿಳಿಯುವುದು ಪಕ್ಕಾ ಆಗಿದೆ‌.


ಇದನ್ನೂ ಓದಿ- Lok Sabha Election 2024: "ಲೋಕಸಭೆಯಲ್ಲೂ ನಮಗೆ 20 ಸ್ಥಾನದವರೆಗೂ ಖಚಿತವಾಗಿ ಗೆಲ್ಲುವ ಅವಕಾಶಗಳಿವೆ "-ಸಿಎಂ ಸಿದ್ದರಾಮಯ್ಯ


ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರ ಹಾಗೂ ಮೈಸೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರ ಒಳಪಡಲಿದ್ದು ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ 7 ಮಂದಿ ಕಾಂಗ್ರೆಸ್ ಶಾಸಕರೇ ಇದ್ದರೆ ಹನೂರಿನಲ್ಲಿ ಮಾತ್ರ ಜಾ.ದಳದ ಶಾಸಕರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.