ಬಳ್ಳಾರಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿ.ಎಸ್. ಉಗ್ರಪ್ಪ ಕಣಕ್ಕೆ

ಬಳ್ಳಾರಿ ಲೋಕಸಭೆ ಉಪಚುನಾವಣೆಗೆ ಬಿಜೆಪಿಯಿಂದ ಬಿ. ಶ್ರೀರಾಮುಲು ಸಹೋದರಿ ಶಾಂತ ಸ್ಪರ್ಧಿಸುತ್ತಿದ್ದಾರೆ.

Last Updated : Oct 15, 2018, 03:34 PM IST
ಬಳ್ಳಾರಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿ.ಎಸ್. ಉಗ್ರಪ್ಪ ಕಣಕ್ಕೆ title=

ಬಳ್ಳಾರಿ: ರಾಜ್ಯದಲ್ಲಿ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಸಮರಕ್ಕೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಅಕ್ಟೋಬರ್ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅ.20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ವಿ.ಎಸ್. ಉಗ್ರಪ್ಪ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದ್ದು, ಅವರಿಗೆ ಬಿ-ಫಾರಂ ನೀಡಿದೆ. ಉಗ್ರಪ್ಪ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ಬಳ್ಳಾರಿ ಲೋಕಸಭೆ ಉಪಚುನಾವಣೆಗೆ ಬಿಜೆಪಿಯಿಂದ ಬಿ. ಶ್ರೀರಾಮುಲು ಸಹೋದರಿ ಶಾಂತ ಸ್ಪರ್ಧಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿ.ಎಸ್. ಉಗ್ರಪ್ಪ ಕಣಕ್ಕಿಳಿಯುತ್ತಿರುವುದು ಉಪಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಉಗ್ರಪ್ಪ ಪರ ದಿನೇಶ್ ಗುಂಡೂರಾವ್ ಬ್ಯಾಟಿಂಗ್:
ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ವಿ.ಎಸ್. ಉಗ್ರಪ್ಪ ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಬಿ ಫಾರಂ ನೀಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಗ್ರಪ್ಪ ಸಂಸದರಾದರೆ ಸಂಸತ್ ನಲ್ಲಿ ರಾಜ್ಯದ ಪರ ದನಿಯೆತ್ತಲಿದ್ದಾರೆ ಎಂದು ಅವರ ಪರ ಬ್ಯಾಟಿಂಗ್ ಮಾಡಿದ್ದಾರೆ.

Trending News