ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಶೀಘ್ರದಲ್ಲೇ ಕಾಂಗ್ರೆಸ್ ನಿಂದ ಪಾದಯಾತ್ರೆ -ಸಿದ್ಧರಾಮಯ್ಯ

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ನಡೆಸಲಾಗುವುದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ (Siddaramaiah) ತಿಳಿಸಿದ್ದಾರೆ.

Written by - Zee Kannada News Desk | Last Updated : Nov 7, 2021, 11:55 PM IST
  • ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ನಡೆಸಲಾಗುವುದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ.
 ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಶೀಘ್ರದಲ್ಲೇ ಕಾಂಗ್ರೆಸ್ ನಿಂದ ಪಾದಯಾತ್ರೆ -ಸಿದ್ಧರಾಮಯ್ಯ  title=
file photo

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ನಡೆಸಲಾಗುವುದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ (Siddaramaiah) ತಿಳಿಸಿದ್ದಾರೆ.

"ನಮ್ಮ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ, ಯೋಜನಾ ವರದಿಯನ್ನು ಸಿದ್ಧಪಡಿಸಿತ್ತು. ಕೇಂದ್ರ ಸರ್ಕಾರ ಅನುಮತಿ ನೀಡದ ಕಾರಣಕ್ಕೆ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ.ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಸಮುದ್ರದ ಪಾಲಾಗುತ್ತಿರುವ ಹೆಚ್ಚುವರಿ ನೀರನ್ನು ನಾವು ಸದ್ಬಳಕೆ ಮಾಡಿಕೊಂಡರೆ ತಮಿಳುನಾಡಿಗೇನು ತೊಂದರೆ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ICC T20 World Cup 2021: ಆಫ್ಘಾನ್ ವಿರುದ್ಧ ಗೆದ್ದು ಸೆಮಿಫೈನಲ್ ಗೆ ಲಗ್ಗೆ ಇಟ್ಟ ಕಿವೀಸ್ ಪಡೆ, ಭಾರತದ ಕನಸು ಭಗ್ನ

ತಮ್ಮ ಪಾಲಿನ ನೀರನ್ನು ಪಡೆಯುವುದಕ್ಕೆ ಮಾತ್ರ ಅವರಿಗೆ ಹಕ್ಕಿರುವುದು.ಯೋಜನೆ ಅನುಷ್ಠಾನವಾದ ಮೇಲೆ ಕೂಡ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ನ್ಯಾಯಾಲಯದ ಆದೇಶದ ಅನುಸಾರ ತಮಿಳುನಾಡಿನ ಪಾಲಿನ ನೀರನ್ನು ಅವರಿಗೆ ಬಿಡುತ್ತದೆ. ಹೀಗಿದ್ದಾಗ ನಮ್ಮ ರಾಜ್ಯದೊಳಗೆ ನಿರ್ಮಿಸಲು ಉದ್ದೇಶಿಸಿರುವ ಯೋಜನೆಗೆ ತಕರಾರು ಮಾಡಲು ಅವರಿಗೆ ಯಾವುದೇ ಹಕ್ಕಿಲ್ಲ.ಮೇಕೆದಾಟು ಯೋಜನೆ ಜಾರಿ ಮಾಡಲು ನಮ್ಮ ರಾಜ್ಯಕ್ಕೆ ಕಾನೂನಾತ್ಮಕ ಸೇರಿದಂತೆ ಎಲ್ಲ ರೀತಿಯ ಹಕ್ಕುಗಳಿವೆ" ಎಂದು ಅವರು ಹೇಳಿದರು.

ಇದನ್ನೂ ಓದಿ: ಹರ್ಭಜನ್ ಸಿಂಗ್ ಸಾರ್ವಕಾಲಿಕ ಶ್ರೇಷ್ಠ T20 XI ಕ್ರಿಕೆಟ್ ತಂಡದಲ್ಲಿ ಕೊಹ್ಲಿಗಿಲ್ಲ ಸ್ಥಾನ..!

ಇದೇ ವೇಳೆ ಅವರು" ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಪರಿಸರ ಇಲಾಖೆಯು ಕೂಡಲೇ ಅನುಮತಿ ಪತ್ರ ನೀಡಬೇಕು ಹಾಗೂ ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ"ಎಂದು ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News