‘ಸ್ವಂತ ಬಲದ ಮೇಲೆ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ’

ಮುಂಬರುವ ವಿಧಾಸಭಾ ಚುನಾವಣೆಯಲ್ಲಿ ನಾವು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Written by - Zee Kannada News Desk | Last Updated : Mar 16, 2022, 08:15 PM IST
  • ಬಿಜೆಪಿ, ಜೆಡಿಎಸ್‌ನವರು ಏನೇ ಹೇಳಿದರೂ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ
  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೇವೆ
  • ಈಗಾಗಲೇ ಸುಮಾರು 15 ಲಕ್ಷ ಜನ ಡಿಜಿಟಲ್ ಸದಸ್ಯತ್ವ ಅಭಿಯಾನದಡಿ ಪಕ್ಷದ ಸದಸ್ಯರಾಗಿದ್ದಾರೆ
‘ಸ್ವಂತ ಬಲದ ಮೇಲೆ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ’ title=
‘ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ’

ಬೆಂಗಳೂರು: ಬಿಜೆಪಿ, ಜೆಡಿಎಸ್‌ನವರು ಏನೇ ಹೇಳಿದರೂ. ರಾಜ್ಯದ ಜನರು ಬದಲಾವಣೆ ಬಯಸಿದ್ದಾರೆ. ಮುಂಬರುವ ವಿಧಾಸಭಾ ಚುನಾವಣೆ(Vidhan Sabha Election 2023)ಯಲ್ಲಿ ನಾವು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ರಾಜ್ಯಾಧ‍್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಹಲವಾರು ಕಾಂಗ್ರೆಸ್ MLAಗಳು ಬಿಜೆಪಿಗೆ ಬರಲು ಕ್ಯೂನಲ್ಲಿದ್ದಾರೆಂದು ಬಿಜೆಪಿ ರಾಜಾಧ‍್ಯಕ್ಷರು ಹೇಳಿದ್ದಾರೆ. ಅವರು ತಡಮಾಡದೆ ಬಿಜೆಪಿಗೆ ಬರುತ್ತೇವೆಂದು ಹೇಳಿರುವ MLAಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ನನಗೆ ಯಾರು ಪಕ್ಷಕ್ಕೆ ಬರುತ್ತೇನೆಂದು ಹೇಳಿದ್ದಾರೆಂಬುದನ್ನು ಬಹಿರಂಗಪಡಿಸುವುದಿಲ್ಲ. ಅದರ ಅಗತ್ಯವೂ ನನಗಿಲ್ಲವೆಂದು ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡ ನಡೆಸಿದವರಿಗೆ ಕಾಂಗ್ರೆಸ್ ಹತ್ತಿರವಾಗಿತ್ತು: ಬಿಜೆಪಿ

ಬಿಜೆಪಿ ಬರುತ್ತೇನೆಂದು ಯಾರ್ಯಾರು ಕ್ಯೂನಲ್ಲಿದ್ದಾರೋ, ಯಾರ್ಯಾರು ನಿಮ್ಮನ್ನು ಭೇಟಿಯಾಗಬೇಕೆಂದು ಬಯಸಿದ್ದಾರೋ, ಮುಖ್ಯಮಂತ್ರಿಗಳನ್ನು ಯಾರು ಭೇಟಿ ಮಾಡಬೇಕೆಂದು ಬಯಸಿದ್ದರೋ ತಡಮಾಡದೆ ಆ MLAಗಳನ್ನು ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಿ. ಸುಮ್ಮನೇ ಕಾಲಹರಣ ಮಾಡಬೇಡಿ ಬರುತ್ತೇವೆ ಎಂದು ಹೇಳುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಿರಿ ಅಂತಾ ಹೇಳಿದ್ದಾರೆ.

ಬಿಜೆಪಿ, ಜೆಡಿಎಸ್‌ನವರು ಏನೇ ಹೇಳಿದರೂ. ರಾಜ್ಯದ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ನಮಗೆ ನಮ್ಮ ಮೇಲೆ ವಿಶ್ವಾಸವಿದೆ. ನಾವು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಈಗಾಗಲೇ ಸುಮಾರು 15 ಲಕ್ಷ ಜನ ಡಿಜಿಟಲ್ ಸದಸ್ಯತ್ವ ಅಭಿಯಾನದಡಿ ಪಕ್ಷದ ಸದಸ್ಯರಾಗಿದ್ದಾರೆ. 40-50 ಲಕ್ಷ ಸದಸ್ಯತ್ವ ನಮ್ಮ ಗುರಿಯಾಗಿದ್ದು, ಮಾರ್ಚ್ 31ರವರೆಗೆ ಸದಸ್ಯತ್ವ ಅಭಿಯಾನ ಮುಂದುವರೆಯಲಿದೆ ಎಂದು ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ವಾದ್ರಾ ರಾಜಕೀಯ ನಿವೃತ್ತಿ ಎಂದು?: ಬಿಜೆಪಿ

ಮುಂಬರುವ 2023ರ ವಿಧಾನಸಭಾ ಚುನಾವಣೆ(Assembly Election 2023)ಗೆ ನಾವು ಸಕಲ ತಯಾರಿ ನಡೆಸುತ್ತಿದ್ದೇವೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಸದಸ್ಯತ್ವ ನೋಂದಣಿ ಅಭಿಯಾನ ನಡೆಯುತ್ತಿದೆ. ಅನೇಕರು ಉತ್ಸಾಹದಿಂದ ಈ ಅಭಿಯಾನದಲ್ಲಿ ಭಾಗಿಯಾಗುತ್ತಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತೇವೆಂದು ಡಿಕೆಶಿ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News