ಕೋಲಾರ: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಇಲ್ಲ. ನಮ್ಮಲ್ಲಿ ಯಾವ ಗುಂಪೂ ಇಲ್ಲ, ಇರುವುದೊಂದೇ ಗುಂಪು ಅದು ಕಾಂಗ್ರೆಸ್‌ ಗುಂಪು. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್(DK Shivakumar)‌, ಬಿಜೆಪಿಯವರಿಗೆ ರಾಜ್ಯದಲ್ಲಿ ಮತ್ತೆ ತಾವು ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಅರ್ಥವಾಗಿದೆ. ನಾಡಿನ ಜನ ಮತ್ತೆ ಕಾಂಗ್ರೆಸ್‌ನ ಕೈಹಿಡಿಯಲಿದ್ದಾರೆ. ಯಾವ ಕ್ಷೇತ್ರಗಳಲ್ಲಿ ಸೋಲು ಅನುಭವಿಸಿದ್ದೇವೆಯೋ ಅಲ್ಲಿಯೇ ಪಕ್ಷ ಸಂಘಟನೆ ಮಾಡುತ್ತೇವೆ. 1999ರಲ್ಲಿ ಎಸ್‌.ಎಂ.ಕೃಷ್ಣ ಅವರು ಪಾಂಚಜನ್ಯ ಮೊಳಗಿಸಿ ಅಧಿಕಾರಕ್ಕೆ ಬಂದರು. ಅದೇ ರೀತಿ ನಾನು ಪಾಂಚಜನ್ಯ ಮೊಳಗಿಸಲಿದ್ದೇನೆ ಎಂದರು.


Dishaank App: ಈಗ ಕುಳಿತಲ್ಲೆ ಸಿಗುತ್ತೆ ಸೈಟಿನ ಸಮಸ್ತ ಮಾಹಿತಿ.! ಭೂಬಕಾಸುರರ ಮೋಸಕ್ಕೆ ಬ್ರೇಕ್..!


ರಾಜ್ಯಾದ್ಯಂತ 100 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿ(Candidates)ಗಳು ಪರಾಭವಗೊಂಡಿದ್ದಾರೆ. ಈ ಕ್ಷೇತ್ರಗಳಲ್ಲಿ ‘ಜನಧ್ವನಿ’ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಾ.3ಕ್ಕೆ ದೊರೆಯಲಿದೆ. ಜನರನ್ನು ಮುಟ್ಟಬೇಕು ಎಂದು ಮಾಡುತ್ತಿರುವ ಕಾರ್ಯಕ್ರಮಕ್ಕೆ ಯಾವುದೇ ವಿಘ್ನವಾಗದಿರಲಿ ಎಂದು ವಿನಾಯಕ ದರ್ಶನಕ್ಕೆ ಕುರುಡುಮಲೆಗೆ ಬಂದಿದ್ದೇವೆ. ಇದರ ಜೊತೆಗೆ ರಾಜ್ಯದಲ್ಲಿ ಅನೇಕ ವಿಘ್ನಗಳಿವೆ. ಇದರ ನಿವಾರಣೆಗೂ ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಲು ಬಂದಿದ್ದೇವೆ. ರಾಜ್ಯದಲ್ಲಿ ಉತ್ತಮವಾಗಿ ಮಳೆ ಬೆಳೆ ಆಗಿ ಜನ ನಿಶ್ಚಿಂತೆಯಿಂದ ಬದುಕಬೇಕು ಎಂದರು.


ಲೇಖಕಿ ಡಾ.ಅನುಪಮಾ ಅವರಿಗೆ ಶ್ರೀ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ರಾಜ್ಯ ಪ್ರಶಸ್ತಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.