ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಲ್ಲಿ  ವ್ಯಕ್ತಿಗಳ ವಿರುದ್ದ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಕಾಂಗ್ರೆಸ್ ನ ಉಸ್ತುವಾರಿ ವೇಣುಗೋಪಾಲ್ ಎಂದು ಎಚ್ಚರಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಮಾತನಾಡಿರುವ ಅವರು ಟಿಕೆಟ್ ನೀಡಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕೆಲಸ ಮಾಡಿ ಅದು ಬಿಟ್ಟು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂದಲ್ಲಿ ಅಂತವರನ್ನು ಪಕ್ಷದಿಂದ ಉಚ್ಚಾಟಿಸಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ, ಆದ್ದರಿಂದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರು ಶ್ರಮಿಸಬೇಕು ಎಂದರು. ಟಿಕೆಟ್ ಸಿಕ್ಕಿಲ್ಲ ಎಂದ ಮಾತ್ರಕ್ಕೆ ಅಂತವರನ್ನು ಪಕ್ಷವು ಕಡೆಗಣಿಸಿಲ್ಲ ಎಂದಲ್ಲ ಎಂದರು.


ಇತ್ತೀಚಿಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ ನಂತರ ಅಸಮಾಧಾನಗೊಂಡು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗವಾಗುತ್ತಾರೆ ಎನ್ನುವವರಿಗೆ ಅವರು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.


ಮೇ 12 ರಂದು ಕರ್ನಾಟಕದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದೆ.ಆದ್ದರಿಂದ ಕಾಂಗ್ರೆಸ್ ಪಕ್ಷವು ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರಿಗೆ ಕಠಿಣ ಸೂಚನೆ ನೀಡಿದೆ.