ಬೆಂಗಳೂರು : ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ. ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ವಿಕಾಸಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮ್ಮಡಿಯಾಗಿದೆ. ಇದು ಚುನಾವಣೆಯ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದರು.


ಪ್ರತಿಪಕ್ಷಗಳಿಂದ ದಿಕ್ಕುತಪ್ಪಿಸುವ ಪ್ರಯತ್ನ:


ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಅತ್ಯಂತ ಹೇಯವಾದುದಾಗಿದ್ದು, ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ್ಮ ಕಾರ್ಯ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅನುಮಾನ ವ್ಯಕ್ತಪಡಿಸುವುದು, ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದರು.


ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಸರಿಯಾಗಿ ವಾದ ಮಂಡಿಸಿಲ್ಲ : ಆರ್‌.ಅಶೋಕ್‌  


ಪ್ರತಿಪಕ್ಷ ನಾಯಕರುಗಳು ತನಿಖೆಯ ದಿಕ್ಕು ತಪ್ಪಿಸಲು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಹಲವು ಮಹಿಳೆಯರು ಈಗಾಗಲೇ ಅತ್ಯಾಚಾರದ ದೂರು ದಾಖಲಿಸಿದ್ದು, ಪ್ರಮುಖ ಆರೋಪಿಗೆ ಶಿಕ್ಷೆ ಆಗಬೇಕೋ ಬೇಡವೋ ಎಂದು ಪ್ರಶ್ನಿಸಿದರು.


ಪ್ರತಿಪಕ್ಷದವರಿಗೆ ಬದ್ಧತೆ ಇದ್ದರೆ ಪ್ರಜ್ವಲ್ ರೇವಣ್ಣನನ್ನು ಕರೆತಂದು ಪೊಲೀಸರಿಗೆ ಒಪ್ಪಿಸಬೇಕು, ತೋರಿಕೆಗೆ 48 ಗಂಟೆಯಲ್ಲಿ ಬಂದು ಬಿಡಿ ಎಂದು ಹೇಳಿದರೆ ಆಗದು. ಪ್ರಕರಣದ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎಂದರು. 


ಕೇಂದ್ರ ಪ್ರಜ್ವಲ್ ಬಂಧನಕ್ಕೆ ಸಹಕರಿಸಬೇಕು:


ಪ್ರಜ್ವಲ್ ರೇವಣ್ಣಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ರಾಜ್ಯದಿಂದ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಇಂಟರ್ ಪೋಲ್ ನೆರವಿನಿಂದ ಆರೋಪಿಯ ಬಂಧನಕ್ಕೆ ಸಹಕಾರ ನೀಡಬೇಕು ಎಂದು ಈಶ್ವರ ಖಂಡ್ರೆ ಒತ್ತಾಯಿಸಿದರು.


ಪೆನ್ ಡ್ರೈವ್ ಪ್ರಕರಣದ ಯಾವುದೇ ಆರೋಪಿಗೆ ಸರ್ಕಾರ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರತಿಪಕ್ಷಗಳು ಅನಗತ್ಯವಾಗಿ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ ಇದಕ್ಕೆ ಯಾವುದೇ ಆಧಾರ ಇಲ್ಲ ಎಂದರು.


ಬೆಂಗಳೂರಲ್ಲಿ 60 ಕೋಟಿ ಮೌಲ್ಯದ 5 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು
ಬೆಂಗಳೂರು, ಮೇ 23: ಬೆಂಗಳೂರು ಬನಶಂಕರಿ ಬಳಿಯ ಬಿ.ಎಂ.ಕಾವಲ್ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.


ಇದನ್ನೂ ಓದಿ:  ಕಲುಷಿತ ನೀರು ಸೇವಿಸಿ ಯುವಕ ಸಾವು; ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!


ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿ ಮಾಡಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಳೆದ ವಾರ ಅರಣ್ಯ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈಗಾಗಲೇ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸುವಂತೆ ನೀಡಿದ್ದ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕಾರ್ಯಪ್ರವೃತ್ತರಾದ ಬೆಂಗಳೂರು ಅರಣ್ಯಾಧಿಕಾರಿಗಳು 5.2 ಎಕರೆ ಒತ್ತುವರಿ ತೆರವು ಮಾಡಿಸಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. 


ಬಿ.ಎಂ. ಕಾವಲ್ ವ್ಯಾಪ್ತಿಯ ಗೊಟ್ಟೆಗೆರೆಪಾಳ್ಯದ ವೆಂಕಟಪ್ಪ ಮತ್ತು ಅವರ ತಾಯಿ ತಿಮ್ಮಕ್ಕ ಎಂಬುವವರು 5 ಎಕರೆ 20 ಗುಂಟೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದರು. ಎ.ಸಿ.ಎಫ್. ನ್ಯಾಯಾಲಯದ ಆದೇಶದ ಮೇರೆಗೆ ಈ ಭೂಮಿ ತೆರವು ಮಾಡಲಾಗಿದೆ. ಈ ಸಂಬಂಧ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಪ್ರತಿವಾದಿಗಳು ಹಾಕಿದ್ದ ದಾವೆ ವಜಾ ಆಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.