ಬೆಂಗಳೂರು :  ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರು ಸ್ಪರ್ಧೆಗೆ ಹೆಚ್ಚಿನ ಒತ್ತಡ ಹಾಕುತ್ತಿದ್ದಾರೆ. ಪಕ್ಷದ ಆದೇಶವನ್ನು ನಾನೂ ಪಾಲಿಸಬೇಕು, ನಮ್ಮ ಮುಖಂಡರೂ ಪಾಲಿಸಬೇಕು” ಎಂದು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

“ಯೋಗೇಶ್ವರ್ ಪರಿಷತ್ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು,  ಅಂಗೀಕಾರವಾಗಿರುವ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದಿದ್ದೇನೆ. ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಚನ್ನಪಟ್ಟಣದಲ್ಲಿ ಇಂದು ಸಭೆ ಮಾಡುತ್ತಿರುವುದು ಗೊತ್ತಿದೆ. ಇದರ ಹೊರತಾಗಿ ಅವರು ಕಾಂಗ್ರೆಸ್ ಸೇರುವ ಕುರಿತು ಯಾವುದೇ ವಿಚಾರ ಗೊತ್ತಿಲ್ಲ”  ಎಂದು ಸುರೇಶ್ ಹೇಳಿದ್ದಾರೆ. 


ಇದನ್ನೂ ಓದಿ : ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ :ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ


ನಮ್ಮ ಪಕ್ಷದ ಮುಂದಿನ ನಡೆ ಹೇಗಿರಬೇಕು ಎಂದು ಜಿಲ್ಲೆ ಶಾಸಕರು ಹಾಗೂ ಮುಖಂಡರ ಜತೆ ನಾವು ಚರ್ಚೆ ಮಾಡಿದ್ದೇವೆ. ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದ್ದು, ಪಕ್ಷದಿಂದಲೇ ಹೋರಾಟ ಮಾಡಬೇಕು ಎನ್ನುವ ಸಲಹೆ ಸಭೆಯಲ್ಲಿ ಬಂದಿದೆ ಎಂದು ಡಿಕೆ ಸುರೇಶ್  ಮಾಹಿತಿ ನೀಡಿದ್ದಾರೆ. 


ಜೆಡಿಎಸ್ ಹಾಗೂ ಬಿಜೆಪಿಯಿಂದ ಬರುವ ಮುಖಂಡರನ್ನು ಕಳೆದ ಮೂರೂ ತಿಂಗಳಿಂದ ಸ್ವಾಗತಿಸಿದ್ದೇವೆ. ಪಕ್ಷದ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಬರುವವರಿಗೆ ಪಕ್ಷಕ್ಕೆ ಸ್ವಾಗತವಿದೆ.ಇದು ಎಲ್ಲರಿಗೂ ಅನ್ವಯ. ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ವಿಚಾರ ನನ್ನ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.  


ಇದನ್ನೂ ಓದಿ : ಚನ್ನಪಟ್ಟಣ ವಿಧಾನಸಭಾ ಉಪಚುನಾಣೆಯಲ್ಲಿ ತ್ರಿಕೋನ ಸ್ಪರ್ಧೆ ನಿಶ್ಚಿತ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.