ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು. ಇದು ನಮಗೆ ನಕಾರಾತ್ಮಕವಾಗಿ ಪರಿಣಮಿಸಿದೆ. ಸಂಡೂರಿನಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ. ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ ಎಂಬ ಅನುಕಂಪವಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಇದು ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಅವರ ಗೆಲುವಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ. ಅಧಿಕಾರಿಗಳು, ಗುತ್ತಿಗೆದಾರರು ಸರ್ಕಾರದ ಪರವಾಗಿ ಕೆಲಸ ಮಾಡಿದ್ದಾರೆ. ಅಧಿಕಾರವಿದ್ದಾಗ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ಭಯದಿಂದ ಮತ ಹಾಕುತ್ತಾರೆ ಎಂದರು.
ಈ ಫಲಿತಾಂಶದ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹಿಂಜರಿಯಬೇಕಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಪಕ್ಷ ಗೆಲ್ಲಲಿದೆ. ಕಾಂಗ್ರೆಸ್‌ನ ಪಾಪದ ಕೊಡ ಬಹುತೇಕ ತುಂಬಿದೆ. ಪೂರ್ತಿ ತುಂಬಿದ ಬಳಿಕ ಪಕ್ಷ ಅವನತಿಗೆ ಹೋಗಲಿದೆ. ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಇನ್ನಷ್ಟು ಬಯಲಿಗೆಳೆಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ದುರುಪಯೋಗ ಮಾಡಿಕೊಂಡು ಗೆದ್ದಿದೆ. ಇದು ಸಾಮಾನ್ಯವಾದ ಫಲಿತಾಂಶವಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಬೀಗಬೇಕಿಲ್ಲ. ಇದರಲ್ಲಿ ಚಮತ್ಕಾರವೇನೂ ಇಲ್ಲ ಎಂದರು.
ಇದನ್ನೂ ಓದಿ: ಈ ಮರದ ಬೇರನ್ನು ಬಟ್ಟೆಯಲ್ಲಿ ಕಟ್ಟಿ ಮನೆಯಲ್ಲಿ ಇಡುವುದರಿಂದ.. ನಿಮ್ಮ ಮನೆಯಲ್ಲಿ ಹಣದ ಹರಿವು ಹೆಚ್ಚಾಗುತ್ತದೆ..!
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಯಶಸ್ಸು ದೊರೆತಿದೆ. ಜಾರ್ಖಂಡ್‌ನಲ್ಲಿ ಮತ ಗಳಿಕೆ ಕಡಿಮೆಯಾಗಿದೆ. ಒಟ್ಟಾರೆಯಾಗಿ ಜನರ ಅಭಿಪ್ರಾಯವನ್ನು ಗೌರವಿಸುತ್ತೇವೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮುಸ್ಲಿಮರಿಗೆ ಮೀಸಲಾತಿ ಕೊಡುವ ಬಗ್ಗೆ ಹೇಳಿತ್ತು. ಆದರೆ ಜನರು ಅವರನ್ನು ತಿರಸ್ಕರಿಸಿದ್ದಾರೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.