ಮಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ಸತತವಾಗಿ ಚುನಾವಣೆ ಅಲೆ ಜೋರಾಗಿತ್ತು. ಸದ್ಯ ಚುನಾವಣೆ ಫಲಿತಾಂಶ ಬಂದಿದೆ. ಹಿನ್ನಲೆ ರಾಜ್ಯದ ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್‌ ಬಹುಮತ ಸಾಧಿಸಿದೆ ಕೆಲವು ಕಡೆಗಳಲ್ಲಿ ಬಿಜೆಪಿ ಜೆಡಿಎಸ್‌ ಮುನ್ನಡೆ ಪಡೆದಿದೆ.


COMMERCIAL BREAK
SCROLL TO CONTINUE READING

ಈ ನಿಟ್ಟಿನಲ್ಲಿ ಮೊನ್ನೆ ಚುನಾವಣೆ ಫಲಿತಾಂಶದಲ್ಲಿ ಗೆದ್ದವರ ಪಕ್ಷದ ಕಾರ್ಯಕರ್ತರು ವಿಜಯೋತ್ಸವವನ್ನು ಸಂಭ್ರಮಿಸಿದ್ದಾರೆ. ಆ ವೇಳೆ ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. 


ಇದನ್ನೂ ಓದಿ: Puttur Assembly Constituency : ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಪೋಸ್ಟರ್‌ ವೈರಲ್‌ !


ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಬೆಳ್ತಂಗಡಿಯ ಪೆರಾಡಿಯಲ್ಲಿ ನಡೆದಿದೆ. ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು ಹಲ್ಲೆ ಮಾಡಿರುವುದಾಗಿ ಹೇಳಲಾಗುತ್ತಿದೆ. 


ಸದ್ಯ ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯ ಎದುರು ಜಮಾಯಿಸಿ , ಬಿಜೆಪಿ ವಿರುದ್ದ ಘೋಷಣೆ ಕೂಗಿದ್ದಾರೆ.


ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಂ ಸೇರಿದಂತೆ ಹಲವರು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ದಯಾನಂದ ಪೂಜಾರಿಗೆ ಧೈರ್ಯ ತುಂಬಿದ್ದಾರೆ. ಘಟನೆಯ ಬಗ್ಗೆ ವೇಣೂರು ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.


ಇದನ್ನೂ ಓದಿ: Karnataka Assembly election: ಹಸ್ತದ ಗುರುತು ಹೇರ್ ಕಟಿಂಗ್ ಮಾಡಿಸಿಕೊಂಡ ಕೈ ಅಭಿಮಾನಿ


ಅಲ್ಲೆ ಇದ್ದ  ಸ್ಥಳೀಯ ಕಾರ್ಯಕರ್ತ ಒಬ್ಬ ಇದು ಮೊದಲ ಬಾರಿಯಲ್ಲ ಯಾವಾಗೂಲೂ ಚುನಾವಣೆ ಫಲಿತಾಂಶದ ವೇಳೆ ಗೆದ್ದ ಪಕ್ಷದವರು ಸೋತವರ ವಿರುದ್ದ ಹೀಗೆ ಹಲ್ಲೆ ಮಾಡುತ್ತಾರೆ ಎಂದಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.