ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಪೊಲೀಸರ ವಶಕ್ಕೆ..!
ಅತ್ಯಾಚಾರ ಆರೋಪ ಎದುರಿಸುತ್ತಿರುವ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಬಂಧನಕ್ಕೆ ನವ್ಯಶ್ರೀ ಪಟ್ಟು ಹಿಡಿದಿದ್ದಾರೆ.
ಬೆಳಗಾವಿ: 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ನಡೆಯುತ್ತಿದ್ದ ಧ್ವಜಾರೋಹಣ ಸಂದರ್ಭದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್‍ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿಯ ರಾಮದೇವ ಹೋಟೆಲ್ ಬಳಿ ನವ್ಯಶ್ರೀಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಸ್ವಾತಂತ್ರ್ಯ ಅಮೃತಮಹೋತ್ಸವ ಧ್ವಜಾರೋಹಣದ ವೇಳೆ ಪ್ರತಿಭಟನೆ ನಡೆಸಲು ನವ್ಯಶ್ರೀ ಉದ್ದೇಶಿಸಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಸೈನಿಕರು, ಕಾರ್ಮಿಕರಿಗೆ ಹೊಸ ಯೋಜನೆಗಳ ಘೋಷಿಸಿದ ಸಿಎಂ
ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎದುರು ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ನವ್ಯಶ್ರೀಯನ್ನು ಖಾಕಿಪಡೆ ವಶಕ್ಕೆ ತೆಗೆದುಕೊಂಡಿದೆ.
ಅತ್ಯಾಚಾರ ಆರೋಪ ಎದುರಿಸುತ್ತಿರುವ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಬಂಧನಕ್ಕೆ ನವ್ಯಶ್ರೀ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಎಪಿಎಂಸಿ ಠಾಣೆಯಲ್ಲಿ ಅವರು ದೂರು ಸಹ ದಾಖಲಿಸಿದ್ದಾರೆ. ಟಾಕಳೆ ಬಂಧನಕ್ಕೆ ಆಗ್ರಹಿಸಿ ಸಚಿವ ಗೋವಿಂದ ಕಾರಜೋಳ ಎದುರೇ ಪ್ರತಿಭಟನೆ ನಡೆಸಲು ನವ್ಯಶ್ರೀ ನಿರ್ಧರಿಸಿದ್ದರಂತೆ.
ಇದನ್ನೂ ಓದಿ: ರಾಜ್ಯದೆಲ್ಲೆಡೆ ಸ್ವಾತಂತ್ರ್ಯೋತ್ಸವ ಸಂಭ್ರಮ: ಜಿಲ್ಲೆ ಜಿಲ್ಲೆಗಳಲ್ಲಿ ಹಾರಾಡಿತು ತ್ರಿವರ್ಣ ಧ್ವಜ
ಮುನ್ನೆಚ್ಚರಿಕೆ ಕ್ರಮವಾಗಿ ಎಪಿಎಂಸಿ ಠಾಣೆ ಪೊಲೀಸರು ನವ್ಯಶ್ರೀಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆಕೆಯನ್ನು ಬೆಳಗಾವಿ ಮಹಿಳಾ ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.