ಬಸ್ಸುಗಳಿಗೆ ಬೆಂಕಿ ಹಚ್ಚಿದವರು ಕಾಂಗ್ರೆಸ್‍ನವರಲ್ಲ: ಸಿದ್ದರಾಮಯ್ಯ

ಕಲ್ಲು ತೂರಾಟ, ಬಸ್ಸಿಗೆ ಬೆಂಕಿ ಹಚ್ಚುವ ಕಾರ್ಯಗಳನ್ನು ನಮ್ಮ ಕಾರ್ಯಕರ್ತರು ಮಾಡಿಲ್ಲ. ಯಾರೋ ಕಿಡಿಗೇಡಿಗಳು ಪ್ರತಿಭಟನೆ ನೆಪದಲ್ಲಿ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Last Updated : Sep 5, 2019, 04:30 PM IST
ಬಸ್ಸುಗಳಿಗೆ ಬೆಂಕಿ ಹಚ್ಚಿದವರು ಕಾಂಗ್ರೆಸ್‍ನವರಲ್ಲ: ಸಿದ್ದರಾಮಯ್ಯ title=

ಹುಬ್ಬಳ್ಳಿ: ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ಬಸ್ಸುಗಳಿಗೆ ಬೆಂಕಿ ಹಚ್ಚಿದವರು ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಗರದ ವಿಮಾನ ನಿಲ್ದಾನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರಿಗೆ ನಾವು ಈ ಮೊದಲೇ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಸೂಚನೆ ನೀಡಿದ್ದೆವು. ಹಾಗಾಗಿ ಕಲ್ಲು ತೂರಾಟ, ಬಸ್ಸಿಗೆ ಬೆಂಕಿ ಹಚ್ಚುವ ಕಾರ್ಯಗಳನ್ನು ನಮ್ಮ ಕಾರ್ಯಕರ್ತರು ಮಾಡಿಲ್ಲ. ಯಾರೋ ಕಿಡಿಗೇಡಿಗಳು ಪ್ರತಿಭಟನೆ ನೆಪದಲ್ಲಿ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ ನೆರೆ ಪರಿಹಾರ ಕಾಮಗಾರಿಗಳ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ನೆರೆ ಸಂತ್ರಸ್ತರ ನೋವು ಅಳಿಸಲು ಸಮಯವಿಲ್ಲ. 10ಸಾವಿರ ರೂ. ಪರಿಹಾರ ನೀಡಿರುವುದು ಬಿಟ್ಟರೆ ಮತ್ಯಾವ ಪುನರ್ವಸತಿ ಕಾರ್ಯ ನಡೆದಿಲ್ಲ. ಈ ಹಿಂದೆ ಇದ್ದ ಪರಿಹಾರ ಕೇಂದ್ರಗಳನ್ನೂ ಮುಚ್ಚಲಾಗಿದೆ ಎಂದು ಆರೋಪಿಸಿದರು.
 

Trending News