ಕಾಂಗ್ರೆಸ್ ನವರೇ ಬಿ.ಆರ್.ಪಾಟೀಲ್ ನ ಹೆದರಿಸುತ್ತಿದ್ದಾರೆ - ವಿಜಯೇಂದ್ರ

 ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರ ಆಡಿಯೋ ವೈರಲ್ ಆದ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Written by - Manjunath Naragund | Last Updated : Jun 22, 2025, 02:38 PM IST
  • ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಬಂದಾಂಗಿನಿಂದ ಬಡವರಿಗೆ, ರೈತರಿಗೆ ಶಾಪವಾಗಿ ಪರಿಣಮಿಸಿದೆ
  • ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಬಡಜನರಿಗೆ ತಾವ ಅನುಕೂಲವೂ ಆಗಿಲ್ಲ
  • ಯಡಿಯೂರಪ್ಪ ಸರ್ಕಾರ ಇದ್ದಾಗ ಅನೇಕ ಬಡವರಿಗೆ ಮನೆಗಳ‌ ನಿರ್ಮಾಣ ಮಾಡಿ ಕೊಟ್ಟಿದ್ರು
ಕಾಂಗ್ರೆಸ್ ನವರೇ ಬಿ.ಆರ್.ಪಾಟೀಲ್ ನ ಹೆದರಿಸುತ್ತಿದ್ದಾರೆ - ವಿಜಯೇಂದ್ರ

ನೆಲಮಂಗಲ:: ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರ ವಸತಿ ಯೋಜನೆ ಅಕ್ರಮಕ್ಕೆ ಸಂಬಂಧಿಸಿದ ಆಡಿಯೋ ವೈರಲ್ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಲಮಂಗಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಸತಿ ಯೋಜನೆಯ ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಸತ್ಯವನ್ನು ಬಿ.ಆರ್. ಪಾಟೀಲ್ ಜನತೆಯ ಮುಂದೆ ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದರು.

Add Zee News as a Preferred Source

ವಿಜಯೇಂದ್ರ ಅವರು, "ರಾಜೀವ್ ಗಾಂಧಿ ವಸತಿ ಯೋಜನೆಯಡಿ ಬಡವರಿಗೆ ಮನೆ ಕೊಡಬೇಕಾದ ಇಲಾಖೆಯಲ್ಲಿ ಲಂಚ ಪಡೆದವರಿಗೆ ಮಾತ್ರ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತಕ್ಕೆ ಸಾಕ್ಷಿಯಾಗಿದೆ. ಬಿ.ಆರ್. ಪಾಟೀಲ್ ಈ ಸತ್ಯವನ್ನು ಬಹಿರಂಗಪಡಿಸಿದ್ದಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕರಿಂದಲೇ ಅವರಿಗೆ ಬೆದರಿಕೆ ಒಡ್ಡಲಾಗುತ್ತಿದೆ," ಎಂದು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: ಭಾರತದಲ್ಲಿಯೇ ಅತಿ ದೊಡ್ಡ ವೀರಗಲ್ಲು ಇರುವುದು ಕರ್ನಾಟಕದ ಗದಗ-ಬೆಟಗೇರಿಯಲ್ಲಿ...!

ಕಾಂಗ್ರೆಸ್ ಸರ್ಕಾರದ ಆಡಳಿತವು ರಾಜ್ಯದ ಬಡವರಿಗೆ ಮತ್ತು ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಕಿಡಿಕಾರಿದ ವಿಜಯೇಂದ್ರ, "ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡಜನರಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಅನೇಕ ಬಡವರಿಗೆ ಮನೆಗಳನ್ನು ನಿರ್ಮಿಸಿ ಕೊಡಲಾಗಿತ್ತು. ಆದರೆ ಈಗ ಗಂಗಾ ಕಲ್ಯಾಣ ಯೋಜನೆಯಂತಹ ಕಾರ್ಯಕ್ರಮಗಳು ಮರೆಯಾಗಿವೆ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರವೊಂದೇ ಉಳಿದಿದೆ," ಎಂದು ಟೀಕಿಸಿದರು.

ರಾಜ್ಯದಾದ್ಯಂತ ಭ್ರಷ್ಟಾಚಾರವು ಕಾಂಗ್ರೆಸ್ ಆಡಳಿತದ ಮುಖ್ಯ ಗುರುತಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, "ಸರ್ಕಾರವೇ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದೆ. ಬಿ.ಆರ್. ಪಾಟೀಲ್ ಅವರ ಮೂಲಕ ಈ ಸತ್ಯ ಹೊರಬಿದ್ದಿದೆ. ಈ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲಿದೆ," ಎಂದು ಘೋಷಿಸಿದರು.

ಈ ಪ್ರಕರಣವು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದ ಮೇಲೆ ಮತ್ತಷ್ಟು ಒತ್ತಡ ಹೆಚ್ಚಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 

About the Author

Trending News