ಕಾಂಗ್ರೆಸ್‍ನ ‘ಗ್ಯಾರಂಟಿ ಸೂತ್ರ’ ದೇಶವನ್ನು ದಿವಾಳಿ ಮಾಡುತ್ತದೆ: ಪ್ರಧಾನಿ ಮೋದಿ

PM Modi In Rajasthan: ಕೇಂದ್ರದ ಬಿಜೆಪಿ ಸರಕಾರಕ್ಕೆ 9 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರಾಜಸ್ಥಾನದಲ್ಲಿ ರ್ಯಾಲಿ ನಡೆಯಿತು. 5 ತಿಂಗಳಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನಕ್ಕೆ ಈ ವರ್ಷ ಪ್ರಧಾನಿ ಮೋದಿ ಅವರ 4ನೇ ಭೇಟಿ ಇದಾಗಿದೆ.

Written by - Puttaraj K Alur | Last Updated : May 31, 2023, 09:11 PM IST
  • ಕಾಂಗ್ರೆಸ್ ಪಕ್ಷವು ಘೋಷಿಸಿರುವ ‘ಗ್ಯಾರಂಟಿ ಸೂತ್ರ’ವು ದೇಶವನ್ನು ದಿವಾಳಿ ಮಾಡುತ್ತದೆ
  • ಕಾಂಗ್ರೆಸ್ ಹೊಸ ಗ್ಯಾರಂಟಿ ಸೂತ್ರ ಅನುಸರಿಸುತ್ತಿದ್ದು, ಜನರಿಗೆ ನೀಡಿದ ಭರವಸೆ ಈಡೇರಿಸುತ್ತಿದ್ದಾರೆಯೇ?
  • ಬಡತನ ನಿರ್ಮೂಲನೆ ಮಾಡುತ್ತೇನೆಂದ ಕಾಂಗ್ರೆಸ್‍ನಿಂದ ದೊಡ್ಡ ದ್ರೋಹವಾಗಿದೆ ಎಂದ ಪ್ರಧಾನಿ ಮೋದಿ
ಕಾಂಗ್ರೆಸ್‍ನ ‘ಗ್ಯಾರಂಟಿ ಸೂತ್ರ’ ದೇಶವನ್ನು ದಿವಾಳಿ ಮಾಡುತ್ತದೆ: ಪ್ರಧಾನಿ ಮೋದಿ title=
ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ!

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ್ದ 5 ಗ್ಯಾರಂಟಿಗಳ ವಿರುದ್ಧ ಪ್ರಧಾನಿ ಮೋದಿ ಗುಡುಗಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ 9 ವರ್ಷ ತುಂಬಿದ ಹಿನ್ನೆಲೆ ರಾಜಸ್ಥಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ‘ಚುನಾವಣೆಯಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಘೋಷಿಸಿರುವ ‘ಗ್ಯಾರಂಟಿ ಸೂತ್ರ’ವು ದೇಶವನ್ನು ದಿವಾಳಿ ಮಾಡುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಹೊಸ ಗ್ಯಾರಂಟಿ ಸೂತ್ರವನ್ನು ಅನುಸರಿಸುತ್ತಿದೆ. ಆದರೆ ಅವರು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತಿದ್ದಾರೆಯೇ? ಕಾಂಗ್ರೆಸ್ 50 ವರ್ಷಗಳ ಹಿಂದೆಯೇ ದೇಶದಲ್ಲಿ ಸಂಪೂರ್ಣವಾಗಿ ಬಡತನ ನಿರ್ಮೂಲನೆ ಮಾಡುವುದಾಗಿ ಹೇಳಿತ್ತು. ಆದರೆ ಇದು ಅವರಿಗೆ ಸಾಧ್ಯವಾಗಿದೆಯೇ? ಇದು ದೇಶದ ಬಡವರಿಗೆ ಕಾಂಗ್ರೆಸ್ ಮಾಡಿರುವ ಅತಿದೊಡ್ಡ ದ್ರೋಹವೆಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: Viral Video: ಟ್ರಾಫಿಕ್ ಸಿಗ್ನಲ್‌ನಲ್ಲೇ ಸ್ನಾನ ಮಾಡಿದ ವ್ಯಕ್ತಿ, ಬೆಟ್ ಗೆಲ್ಲಲು ಏನೆಲ್ಲಾ ಮಾಡಿದ ನೋಡಿ!

ದೇಶದ ಬಡಜನರನ್ನು ದಾರಿ ತಪ್ಪಿಸುವುದು, ಅವರನ್ನು ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುವುದೇ ಕಾಂಗ್ರೆಸ್ ಪಕ್ಷದ ನೀತಿಯಾಗಿದೆ. ಇದರಿಂದ ರಾಜಸ್ಥಾನದ ಜನರು ಸಹ ತುಂಬಾ ತೊಂದರೆ ಅನುಭವಿಸಿದ್ದಾರೆ. ರಾಜಸ್ಥಾನಕ್ಕೆ ಕಾಂಗ್ರೆಸ್‍ನಿಂದ ಏನು ಸಿಕ್ಕಿದೆ? ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರು ತಮ್ಮ ತಮ್ಮಲ್ಲಿಯೇ ಜಗಳವಾಡುತ್ತಿದ್ದಾರೆ ಎಂದು ಕುಟುಕಿದರು. 2014ಕ್ಕೂ ಮೊದಲು ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟಿಸಿದ್ದರು. ಪ್ರಮುಖ ನಗರಗಳಲ್ಲಿ ಅನೇಕ ಭಯೋತ್ಪಾದಕ ದಾಳಿಗಳು ನಡೆದಿದ್ದವು. ಆದರೆ ಕಾಂಗ್ರೆಸ್ ಕಂಟ್ರೋಲ್ ಮೂಲಕ ಸರ್ಕಾರವನ್ನು ನಡೆಸುತ್ತಿತ್ತು ಎಂದು ಮೋದಿ ಆರೋಪಿಸಿದರು.

ಕಳೆದ 9 ವರ್ಷಗಳಲ್ಲಿ ತಮ್ಮ ಸರ್ಕಾರವು ಜನರ ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ ಎಂದು ಹೇಳಿದ ಪ್ರಧಾನಿ ಮೋದಿಯವರು, ‘ತಮ್ಮ ಪಕ್ಷದ ಯೋಜನೆಗಳನ್ನು ಇದೇ ವೇಳೆ ಉಲ್ಲೇಖಿಸಿದರು. 100 ಪೈಸೆಯಲ್ಲಿ ಕೇವಲ 15 ಪೈಸೆ ಬಡವರಿಗೆ ತಲುಪುತ್ತಿದೆ ಎಂಬ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹಳೆಯ ಹೇಳಿಕೆ ಉಲ್ಲೇಖಿಸಿ ಅವರು, ‘ಕಾಂಗ್ರೆಸ್ ದೇಶದ ರಕ್ತವನ್ನು ಹೀರುವ ಮತ್ತು ಅಭಿವೃದ್ಧಿಗೆ ಅಡ್ಡಿಪಡಿಸುವ ಭ್ರಷ್ಟ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿತು’ ಎಂದು ಆರೋಪಿಸಿದರು.

ಇದನ್ನೂ ಓದಿ: ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಶ್ಲೋಕಾ ಆಕಾಶ್‌ ಅಂಬಾನಿ..!

ಇದೀಗ ಜಗತ್ತು ಭಾರತದ ಬಗ್ಗೆ ಮಾತನಾಡುತ್ತಿದೆ. ದೇಶದ ತೀವ್ರ ಬಡತನ ಕೊನೆಗೊಳಿಸಲು ಭಾರತವು ಬಹಳ ಹತ್ತಿರದಲ್ಲಿದೆ ಎಂದು ತಜ್ಞರು ಹೇಳಿದ್ದಾರೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ನಾವು ಕೆಲಸ ಮಾಡುತ್ತಿದ್ದೇವೆಂದು ಪ್ರಧಾನಿ ಮೋದಿ ಹೇಳಿದರು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News