ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ್ದ 5 ಗ್ಯಾರಂಟಿಗಳ ವಿರುದ್ಧ ಪ್ರಧಾನಿ ಮೋದಿ ಗುಡುಗಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ 9 ವರ್ಷ ತುಂಬಿದ ಹಿನ್ನೆಲೆ ರಾಜಸ್ಥಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ‘ಚುನಾವಣೆಯಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಘೋಷಿಸಿರುವ ‘ಗ್ಯಾರಂಟಿ ಸೂತ್ರ’ವು ದೇಶವನ್ನು ದಿವಾಳಿ ಮಾಡುತ್ತದೆ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಪಕ್ಷವು ಹೊಸ ಗ್ಯಾರಂಟಿ ಸೂತ್ರವನ್ನು ಅನುಸರಿಸುತ್ತಿದೆ. ಆದರೆ ಅವರು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತಿದ್ದಾರೆಯೇ? ಕಾಂಗ್ರೆಸ್ 50 ವರ್ಷಗಳ ಹಿಂದೆಯೇ ದೇಶದಲ್ಲಿ ಸಂಪೂರ್ಣವಾಗಿ ಬಡತನ ನಿರ್ಮೂಲನೆ ಮಾಡುವುದಾಗಿ ಹೇಳಿತ್ತು. ಆದರೆ ಇದು ಅವರಿಗೆ ಸಾಧ್ಯವಾಗಿದೆಯೇ? ಇದು ದೇಶದ ಬಡವರಿಗೆ ಕಾಂಗ್ರೆಸ್ ಮಾಡಿರುವ ಅತಿದೊಡ್ಡ ದ್ರೋಹವೆಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.


ಇದನ್ನೂ ಓದಿ: Viral Video: ಟ್ರಾಫಿಕ್ ಸಿಗ್ನಲ್‌ನಲ್ಲೇ ಸ್ನಾನ ಮಾಡಿದ ವ್ಯಕ್ತಿ, ಬೆಟ್ ಗೆಲ್ಲಲು ಏನೆಲ್ಲಾ ಮಾಡಿದ ನೋಡಿ!


ದೇಶದ ಬಡಜನರನ್ನು ದಾರಿ ತಪ್ಪಿಸುವುದು, ಅವರನ್ನು ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುವುದೇ ಕಾಂಗ್ರೆಸ್ ಪಕ್ಷದ ನೀತಿಯಾಗಿದೆ. ಇದರಿಂದ ರಾಜಸ್ಥಾನದ ಜನರು ಸಹ ತುಂಬಾ ತೊಂದರೆ ಅನುಭವಿಸಿದ್ದಾರೆ. ರಾಜಸ್ಥಾನಕ್ಕೆ ಕಾಂಗ್ರೆಸ್‍ನಿಂದ ಏನು ಸಿಕ್ಕಿದೆ? ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರು ತಮ್ಮ ತಮ್ಮಲ್ಲಿಯೇ ಜಗಳವಾಡುತ್ತಿದ್ದಾರೆ ಎಂದು ಕುಟುಕಿದರು. 2014ಕ್ಕೂ ಮೊದಲು ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟಿಸಿದ್ದರು. ಪ್ರಮುಖ ನಗರಗಳಲ್ಲಿ ಅನೇಕ ಭಯೋತ್ಪಾದಕ ದಾಳಿಗಳು ನಡೆದಿದ್ದವು. ಆದರೆ ಕಾಂಗ್ರೆಸ್ ಕಂಟ್ರೋಲ್ ಮೂಲಕ ಸರ್ಕಾರವನ್ನು ನಡೆಸುತ್ತಿತ್ತು ಎಂದು ಮೋದಿ ಆರೋಪಿಸಿದರು.


ಕಳೆದ 9 ವರ್ಷಗಳಲ್ಲಿ ತಮ್ಮ ಸರ್ಕಾರವು ಜನರ ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ ಎಂದು ಹೇಳಿದ ಪ್ರಧಾನಿ ಮೋದಿಯವರು, ‘ತಮ್ಮ ಪಕ್ಷದ ಯೋಜನೆಗಳನ್ನು ಇದೇ ವೇಳೆ ಉಲ್ಲೇಖಿಸಿದರು. 100 ಪೈಸೆಯಲ್ಲಿ ಕೇವಲ 15 ಪೈಸೆ ಬಡವರಿಗೆ ತಲುಪುತ್ತಿದೆ ಎಂಬ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹಳೆಯ ಹೇಳಿಕೆ ಉಲ್ಲೇಖಿಸಿ ಅವರು, ‘ಕಾಂಗ್ರೆಸ್ ದೇಶದ ರಕ್ತವನ್ನು ಹೀರುವ ಮತ್ತು ಅಭಿವೃದ್ಧಿಗೆ ಅಡ್ಡಿಪಡಿಸುವ ಭ್ರಷ್ಟ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿತು’ ಎಂದು ಆರೋಪಿಸಿದರು.


ಇದನ್ನೂ ಓದಿ: ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಶ್ಲೋಕಾ ಆಕಾಶ್‌ ಅಂಬಾನಿ..!


ಇದೀಗ ಜಗತ್ತು ಭಾರತದ ಬಗ್ಗೆ ಮಾತನಾಡುತ್ತಿದೆ. ದೇಶದ ತೀವ್ರ ಬಡತನ ಕೊನೆಗೊಳಿಸಲು ಭಾರತವು ಬಹಳ ಹತ್ತಿರದಲ್ಲಿದೆ ಎಂದು ತಜ್ಞರು ಹೇಳಿದ್ದಾರೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ನಾವು ಕೆಲಸ ಮಾಡುತ್ತಿದ್ದೇವೆಂದು ಪ್ರಧಾನಿ ಮೋದಿ ಹೇಳಿದರು.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.