KSRTC bus station at Davangere : ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣ ಮಾಡಲಾಗಿರುವ ದಾವಣಗೆರೆ ಮುಖ್ಯ ಬಸ್ ನಿಲ್ದಾಣ ಹಾಗೂ ಬೇತೂರು ರಸ್ತೆಯಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಲೋಕಾರ್ಪಣೆ ಮಾಡಿ ಮುಖ್ಯ ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಮಾತನಾಡಿ ದಾವಣಗೆರೆ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಲವು ಆಧುನಿಕ ಸೌಕರ್ಯಗಳನ್ನು ಹೊಂದಿದ್ದು, ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್‌ಗಳ ಜೊತೆಗೆ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ರಾಜ್ಯದಲ್ಲಿನ ಮೊದಲ ಬಸ್ ನಿಲ್ದಾಣ ಇದಾಗಿದೆ  ಎಂದರು. 


COMMERCIAL BREAK
SCROLL TO CONTINUE READING

ಸ್ಮಾರ್ಟ್ ಸಿಟಿ ಯೋಜನೆಯಡಿ ದಾವಣಗೆರೆ ಮುಖ್ಯ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆಯ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಮುಖ್ಯ ಬಸ್ ನಿಲ್ದಾಣವನ್ನು 109.84 ಕೋಟಿ ರೂಪಾಯಿ ವೆಚ್ಚದಲ್ಲಿ 6.07 ಹೆಕ್ಟೇರ್‌ ವಿಸ್ತೀರ್ಣದಲ್ಲಿ ಬಸ್‌ ನಿಲ್ದಾಣ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಶೇಕಡಾ 25ರಷ್ಟು ನಿಗಮದ ಅನುದಾನ ಹಾಗೂ ಶೇಕಡಾ 75ರಷ್ಟು ಸ್ಮಾರ್ಟ್ ಸಿಟಿ ಯೋಜನೆ ಅನುದಾನ ಆಗಿದೆ. ಬೇತೂರು ರಸ್ತೆಯಲ್ಲಿನ ಬಸ್ ನಿಲ್ದಾಣವನ್ನು 1.20 ಹೆಕ್ಟೇರ್‌ ಜಾಗದಲ್ಲಿ 8.96 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ದಾವಣಗೆರೆಯಿಂದ ಪ್ರತಿನಿತ್ಯ 1,400ಕ್ಕಿಂತ ಹೆಚ್ಚು ಬಸ್‍ಗಳು ಬಂದು ಹೋಗುತ್ತವೆ. ಇಲ್ಲಿಗೆ ಆಗಮಿಸುವ ಬಸ್‍ಗಳ ಸಂಖ್ಯೆಯು ಹೆಚ್ಚಿದ್ದು, ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದರು.


ಇದನ್ನು ಓದಿ : Sapta Sagardache Ello : ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ 'ಸಪ್ತ ಸಾಗರದಾಚೆ ಎಲ್ಲೋ (Side-A)' : ಇಂದು ಸಂಜೆ 7.30ಕ್ಕೆ ನಿಮ್ಮ ಜೀ ಕನ್ನಡ ವಾಹಿನಿಯಲ್ಲಿ


ಸಿಬ್ಬಂದಿ ನೇಮಕ, ಹೊಸ ಬಸ್‍ಗಳ ಖರೀದಿ: 2016ರಿಂದ ಸಾರಿಗೆ ನಿಗಮದ ಸಿಬ್ಬಂದಿ ನೇಮಕಾತಿ ನಡೆಯದ ಕಾರಣ ಹೊಸ ಬಸ್ ಖರೀದಿಸಿದರೂ ಸಿಬ್ಬಂದಿ ಕೊರತೆ ಆಗುತ್ತಿತ್ತು. ಇದನ್ನು ಮನಗಂಡು 9,000 ನಿಗಮದ ಸಿಬ್ಬಂದಿ ನೇಮಕಾತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 1,619 ಸಿಬ್ಬಂದಿಗೆ ಕಲ್ಯಾಣ ಕರ್ನಾಟಕ ವಲಯಕ್ಕೆ ನೇಮಕಾತಿ ಆದೇಶ ನೀಡಲಾಗಿದೆ. ಖಾಲಿ ಇರುವ ಸಿಬ್ಬಂದಿ ನೇಮಕಾತಿ ಮಾಡಿದ ತಕ್ಷಣವೇ ಕೊರೋನಾ ಸಂದರ್ಭದಲ್ಲಿ ನಿಲ್ಲಿಸಲಾಗಿದ್ದ ಹಳೆ ಮಾರ್ಗ ಮತ್ತು ಪ್ರಯಾಣಿಕರ ದಟ್ಟಣೆ ಇರುವ ಹೊಸ ಮಾರ್ಗಗಳಲ್ಲಿ ಬಸ್ ಓಡಿಸಲಾಗುತ್ತದೆ . ವಿವಿಧ ಸಾರಿಗೆ ನಿಗಮಗಳಿಗೆ ಸುಮಾರು 5,800 ಹೊಸ ಬಸ್‍ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ ಅರ್ಧಕ್ಕೂ ಹೆಚ್ಚು ಹೊಸ ಬಸ್‍ಗಳು ಬಂದಿವೆ. ಉಳಿದ ಅರ್ಧ ಬಸ್‍ಗಳು ಬರಬೇಕಾಗಿದೆ ಎಂದರು.


ಶಕ್ತಿ ತಂದ ಮೇಲೆ ಮಹಿಳೆಯರಿಗೆ ಶಕ್ತಿ: ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಸರ್ಕಾರ ಬಂದು 15 ದಿನಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸುವ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಜಾರಿಯಿಂದ ಮುಂದಿನ ದಿನಗಳಲ್ಲಿ ನಿಗಮದ ಬಸ್‍ಗಳಿಗೆ ಇಂಧನ ಭರಿಸಲು ಹಣವಿಲ್ಲದಂತಾಗುತ್ತದೆ ಎಂಬ ಭಾವನೆಯನ್ನು ನಿವಾರಣೆ ಮಾಡಿ ನಿಗಮವನ್ನು ಅತ್ಯುತ್ತಮವಾಗಿ ನಡೆಸಿಕೊಂಡು ಹೋಗಲಾಗುತ್ತಿದೆ.


ಪಂಪಾಪತಿ ಹೆಸರು ಪರಿಶೀಲನೆ: ದಾವಣಗೆರೆ ಬಸ್ ನಿಲ್ದಾಣಕ್ಕಾಗಿ ಶ್ರಮಿಸಿದ ಮಾಜಿ ಶಾಸಕರಾದ ಪಂಪಾಪತಿಯವರ ಹೆಸರಿಡಬೇಕು ಎಂದು ಬೇಡಿಕೆ ಇದ್ದು, ಈ ಬಗ್ಗೆ ನಿಗಮದ ಆಡಳಿತ ಮಂಡಳಿಯಲ್ಲಿ ನಿರ್ಧರಿಸಬೇಕಾಗಿದೆ. ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ಇನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ನೂತನ ಬಸ್ ನಿಲ್ದಾಣ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಇದನ್ನು ಓದಿ : ಹೃತಿಕ್ ರೋಷನ್‌ ಹಿಡಿದು ವಿರಾಟ್‌ ಕೊಹ್ಲಿ ವರೆಗೆ ಈ 6 ಸೆಲೆಬ್ರಿಟಿಗಳು ಅಂಬಾನಿ ಕಾರ್ಯಕ್ರಮಕ್ಕೆ ಬಂದಿಲ್ಲ..! ಏಕೆ ಗೊತ್ತೆ..?


ಬೆಳ್ಳಿ ಪದಕ ವಿಜೇತ ಚಾಲಕರು: ಕೆ.ಎಸ್.ಆರ್.ಟಿ.ಸಿ.ಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಜಿ.ಮಂಜುನಾಥ್, ರವಿಕುಮಾರ್.ಆರ್, ಚಂದ್ರನಾಯ್ಕ, ಮೊಹಮ್ಮದ್ ಅಕ್ರಂ ಅಲಿ ಇವರು ಸತತ 7 ವರ್ಷಗಳ ಕಾಲ ಅಪರಾಧ ರಹಿತ, ಅಪಘಾತ ರಹಿತವಾದ ಚಾಲನೆ ಮಾಡಿದ್ದು, ಇವರಿಗೆ ಬೆಳ್ಳಿ ಪದಕ ಮತ್ತು ನಗದು ಬಹುಮಾನ ವಿತರಣೆ ಮಾಡಲಾಯಿತು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.