ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ಬಿಲ್ಡ್‍ರ್ಸ್ ಗೆ ದಂಡ ವಿಧಿಸಿದ ಗ್ರಾಹಕರ ಆಯೋಗ 

ಬಾಗಲಕೋಟೆಯ ನಿವಾಸಿ ಗೀತಾ ಗೌಡರ ಎಂಬುವವರು ಧಾರವಾಡದ ಎಮ್.ಎಸ್.ಗ್ರೀನ್ ಕೌಂಟಿಯ ಮಾಲೀಕರಾದ ಶ್ರೀನಿವಾಸ ನಾಯ್ಡು ಎಂಬುವವರು ಈಟಿಗಟ್ಟಿಯ ಪ್ಲಾಟ್‍ನಂ.108 ನ್ನು ರೂ.4,80,000/-ಗಳಿಗೆ 2014ರಲ್ಲಿ ಖರೀದಿಸುವ ಕರಾರು ಒಪ್ಪಂದ ಮಾಡಿಕೊಂಡಿದ್ದರು.

Written by - Manjunath N | Last Updated : Aug 22, 2023, 04:00 PM IST
  • ದೂರುದಾರನಿಗೆ ಹಣವನ್ನು ಹಿಂತಿರುಗಿಸದೆ ಇರುವುದು ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.
  • ದೂರುದಾರರು ಸಂದಾಯ ಮಾಡಿದ ರೂ.3,66,000/-ಮತ್ತು ಅದರ ಮೇಲೆ ಪೂರ್ತಿ ಹಣ ಸಂದಾಯವಾಗುವವರೆಗೆ ಶೇ.8 ರಂತೆ ವಾರ್ಷಿಕ ಬಡ್ಡಿ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಎದುರುದಾರರಿಗೆ ಆದೇಶಿಸಿದೆ.
  • ದೂರುದಾರರಿಗೆ ಆಗಿರುವ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ ರೂ.50,000/- ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚ ಅಂತಾ ರೂ.10,000/- ನೀಡುವಂತೆ ಆರ್.ಎಮ್.ಬಿಲ್ಡ್‍ರ್ಸ್ ಎದುರುದಾರರಿಗೆ ಆಯೋಗ ತನ್ನ ತೀರ್ಪಿನಲ್ಲಿ ಹೇಳಿದೆ.
ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ಬಿಲ್ಡ್‍ರ್ಸ್ ಗೆ ದಂಡ ವಿಧಿಸಿದ ಗ್ರಾಹಕರ ಆಯೋಗ  title=
ಸಾಂದರ್ಭಿಕ ಚಿತ್ರ

ಧಾರವಾಡ : ಬಾಗಲಕೋಟೆಯ ನಿವಾಸಿ ಗೀತಾ ಗೌಡರ ಎಂಬುವವರು ಧಾರವಾಡದ ಎಮ್.ಎಸ್.ಗ್ರೀನ್ ಕೌಂಟಿಯ ಮಾಲೀಕರಾದ ಶ್ರೀನಿವಾಸ ನಾಯ್ಡು ಎಂಬುವವರು ಈಟಿಗಟ್ಟಿಯ ಪ್ಲಾಟ್‍ನಂ.108 ನ್ನು ರೂ.4,80,000/-ಗಳಿಗೆ 2014ರಲ್ಲಿ ಖರೀದಿಸುವ ಕರಾರು ಒಪ್ಪಂದ ಮಾಡಿಕೊಂಡಿದ್ದರು.

ಇದನ್ನೂ ಓದಿ: "ನಿಮ್ಮ ಮಾಮನ್ನ ನಂಬಬೇಡಿ, ಈಗ ಚಾಚಾನ್ನ ನಂಬಿ"

ಆ ಪೈಕಿ ಬೇರೆ ಬೇರೆ ದಿನಾಂಕಗಳಂದು ದೂರುದಾರಳು ಒಟ್ಟು ರೂ.3,66,000/- ಅಡವಾನ್ಸ್ ಹಣ ಎದುರುದಾರ, ಬಿಲ್ಡರ್‍ಗೆ ಕೊಟ್ಟಿದ್ದರು.ಬಾಕಿ ಮೊತ್ತವನ್ನು ತೆಗೆದುಕೊಂಡು ಖರೀದಿ ಪತ್ರ ನೋಂದಣಿ ಮಾಡಿಕೊಡುವಂತೆ ದೂರುದಾರ ಹಲವಾರು ಬಾರಿ ಎದುರುದಾರರಿಗೆ ಕೇಳಿಕೊಂಡರೂ ಸಹ ಎದುರುದಾರರು ಖರೀದಿ ಪತ್ರ ನೋಂದಣಿ ಮಾಡಿಕೊಟ್ಟಿರಲಿಲ್ಲ.ಎದುರುದಾರರ ಇಂತಹ ನಡಾವಳಿಯಿಂದ ತನಗೆ ಮೋಸವಾಗಿದೆ ಮತ್ತು ಅವರು ಸೇವಾನ್ಯೂನ್ಯತೆ ಎಸಗಿದ್ದಾರೆ ಅಂತ ಹೇಳಿ ಬಿಲ್ಡರ್ ವಿರುದ್ಧ ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಫಿಕ್ಸ್ :ಈ ಶುಭದಿನ ನೆರವೇರಲಿದೆ ‘ಪಟ್ಟಾಭಿಷೇಕ’

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ.ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ.ಅ. ಬೋಳಶೆಟ್ಟಿ ಮತ್ತು ಪ್ರಭು. ಸಿ. ಹಿರೇಮಠ ಅವರು ದೂರುದಾರನಿಂದ ಬಾಕಿ ಹಣವನ್ನು ಪಡೆದುಕೊಂಡು ಎದುರುದಾರ ಅವರಿಗೆ ಪ್ಲಾಟ್ ಖರೀದಿ ಪತ್ರ ನೋಂದಣಿ ಮಾಡಿಕೊಡಲು ವಿಫಲರಾಗಿರುವುದು ಮತ್ತು ದೂರುದಾರನಿಗೆ ಹಣವನ್ನು ಹಿಂತಿರುಗಿಸದೆ ಇರುವುದು ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ. ದೂರುದಾರರು ಸಂದಾಯ ಮಾಡಿದ ರೂ.3,66,000/-ಮತ್ತು ಅದರ ಮೇಲೆ ಪೂರ್ತಿ ಹಣ ಸಂದಾಯವಾಗುವವರೆಗೆ ಶೇ.8 ರಂತೆ ವಾರ್ಷಿಕ ಬಡ್ಡಿ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಎದುರುದಾರರಿಗೆ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ ರೂ.50,000/- ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚ ಅಂತಾ ರೂ.10,000/- ನೀಡುವಂತೆ ಆರ್.ಎಮ್.ಬಿಲ್ಡ್‍ರ್ಸ್ ಎದುರುದಾರರಿಗೆ ಆಯೋಗ ತನ್ನ ತೀರ್ಪಿನಲ್ಲಿ ಹೇಳಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News