ಚಾಮುಂಡೇಶ್ವರಿಯಿಂದ ಮಾತ್ರ ಸ್ಪರ್ಧಿಸುವೆ- ಸಿದ್ದರಾಮಯ್ಯ
ಉತ್ತರ ಕರ್ನಾಟಕದ ಜನರು ನನ್ನನ್ನು ಬಾದಾಮಿಯಿಂದ ಸ್ಪರ್ಧಿಸಲು ವಿನಂತಿಸಿದ್ದಾರೆ. ಅವರ ಪ್ರೀತಿಗೆ ನಾನು ಕೃತಜ್ಞರಾಗಿರುತ್ತೇನೆ- ಸಿದ್ದರಾಮಯ್ಯ
ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಾದಾಮಿ ಕ್ಷೇತ್ರದಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿದ್ದಾರೆ ಎಂಬ ಊಹಾಪೋಹಗಳಿಗೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಉತ್ತರ ಕರ್ನಾಟಕದ ಜನರು ನನ್ನನ್ನು ಬಾದಾಮಿಯಿಂದ ಸ್ಪರ್ಧಿಸಲು ವಿನಂತಿಸಿದ್ದಾರೆ. ಅವರ ಪ್ರೀತಿಗೆ ನಾನು ಕೃತಜ್ಞರಾಗಿರುತ್ತೇನೆ. ಆದರೆ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.