ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ. ಕಳೆದ 10 ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದೂ ಸಹ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.


ಇದನ್ನೂ ಓದಿ : SSLC Exam 2021 : 'SSLC' ಪರೀಕ್ಷೆ 2021 ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ!


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ(Rainfall)ಯಾಗುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.


ಇದನ್ನೂ ಓದಿ : ಸಂವಿಧಾನದ ಮೌಲ್ಯಗಳನ್ನು ಸಾರಿದ ವಿವಾಹ


ಕರಾವಳಿ ತೀರದ ಜಿಲ್ಲೆಗಳಲ್ಲಿ ಸುಮಾರು 10 ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿತ್ತು. ಇದೀಗ 2 ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿದ್ದು, ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಉತ್ತರ ಕರ್ನಾಟಕದ ಕೃಷ್ಣಾ ಮತ್ತು ಘಟಪ್ರಭಾ ನದಿ ತೀರಗಳಲ್ಲಿ ನೀರಿನ ಹರಿವು ಹೆಚ್ಚಾಗಿ, ಪ್ರವಾಹದ ಭೀತಿ ಎದುರಾಗಿದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವುದರಿಂದ 'ಯೆಲ್ಲೋ ಅಲರ್ಟ್'​ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇಂದಿನಿಂದ ಕಡಿಮೆಯಾಗುವ ಸಾಧ್ಯತೆಯಿದೆ.


ಇದನ್ನೂ ಓದಿ : ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಮಳೆ ಬಿರುಸು, 24 ಗಂಟೆ ಭರ್ಜರಿ ಮಳೆಯ ಮುನ್ಸೂಚನೆ


ಕರ್ನಾಟಕ ಸರ್ಕಾರ(Government of Karnataka) ನೀಡಿರುವ ಮಾಹಿತಿ ಪ್ರಕಾರ, ರಾಜ್ಯದ 1,710 ಗ್ರಾಮಗಳು ಪ್ರವಾಹದ ಭೀತಿಯಲ್ಲಿತ್ತು. ಕರಾವಳಿಯಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದ್ದು, ಮಲೆನಾಡಿನ ಹೊಸನಗರ, ತೀರ್ಥಹಳ್ಳಿ, ಸಾಗರ, ಸಿದ್ಧಾಪುರ, ಶಿರಸಿ, ಮೂಡಿಗೆರೆ, ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು ತಾಲೂಕುಗಳಲ್ಲಿಯೂ ನಿನ್ನೆ ಸರಾಸರಿ ಮಳೆಯಾಗಿದೆ.


ಇದನ್ನೂ ಓದಿ : Ration Card: ಮನೆಯಲ್ಲಿಯೇ ಕುಳಿತು ರೇಷನ್ ಕಾರ್ಡ್‌ನಲ್ಲಿ ಹೊಸ ಸದಸ್ಯರ ಹೆಸರನ್ನು ಸೇರಿಸಲು ಇದು ಸುಲಭ ಪ್ರಕ್ರಿಯೆ


ನೆರೆಯ ಮಹಾರಾಷ್ಟ್ರದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಮುಂಬೈನಲ್ಲಿ ಜೂನ್ 25ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ಮಳೆಯಾದರೆ ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.