ಕೇಂದ್ರ-ರಾಜ್ಯ ಸಚಿವರ ನಡುವೆ ಮುಂದುವರೆದ ಟ್ವೀಟ್ ವಾರ್!
ಗೃಹ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ನಡುವೆ ಟ್ವೀಟ್ ವಾರ್ ಮುಂದುವರೆದಿದೆ.
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಖಂಡಿಸಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕಾಂಗ್ರೇಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕತಪಡಿಸಿ ಟ್ವೀಟರ್ ನಲ್ಲಿ ಕಾಂಗ್ರೆಸಿನ ಪಂಚ ಮುಗ್ಧರಿಗೆ ಪಂಚ ಪ್ರಶ್ನೆಗಳು ಎಂದು ಪ್ರಶ್ನೆಗಳ ಸುರಿಮಳೆ ಗೈದಿದ್ದರು. ಇದಕ್ಕೆ ತಿರುಗೇಟು ನೀಡಿದ ರಾಮಲಿಂಗಾ ರೆಡ್ಡಿ ಸತ್ತವರನ್ನು ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ್ದರು. ಇದೀಗ ಇವರ ಸಮರ ಟ್ವಿಟ್ಟರಿನಲ್ಲಿ ಮತ್ತೆ ಮುಂದುವರೆದಿದೆ.
ಕಾಂಗ್ರೆಸಿನ ಪಂಚ ಮುಗ್ಧರಿಗೆ ಪಂಚ ಪ್ರಶ್ನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗ ರೆಡ್ಡಿ, ಸಚಿವ ಕೆ.ಜೆ.ಜಾರ್ಜ್ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮತ್ತು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಅವರನ್ನು ಟ್ಯಾಗ್ ಮಾಡಿ ಪ್ರಶ್ನೆಗಳ ಸುರಿಮಳೆ ಗೈದಿದ್ದರು.
ಡಿವಿಎಸ್ ಪ್ರಶ್ನೆಗೆ ತಿರುಗೇಟು ನೀಡಿರುವ ಗೃಹಸಚಿವ ರಾಮಲಿಂಗಾರೆಡ್ಡಿ ನಾನು ಈ ಮೊದಲು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುವಿರಾ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸಚಿವ ಸದಾನಂದ ಗೌಡರ ಟ್ವೀಟ್
ಪ್ರಶ್ನೆ 1
ಪ್ರಶ್ನೆ 2
ಪ್ರಶ್ನೆ 3
ಪ್ರಶ್ನೆ 4
ಪ್ರಶ್ನೆ 5
ಗೃಹ ಸಚಿವ ರಾಮಲಿಂಗ ರೆಡ್ಡಿ ಟ್ವೀಟ್